ಬೆಂಗಳೂರು,ಡಿ.2- ಡಿಸೆಂಬರ್ 19ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಈ ಬಾರಿಯ ಅಧಿವೇಶನದಲ್ಲಿ ಕಾವೇರಿದ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಕಳೆದ ಬಾರಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆದಿತ್ತು. ಆದರೆ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಪುಂಡಾಟಿಕೆ ನಡೆಸಿತ್ತು. ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆಗೆ ಹಾನಿ ಹಾಗೂ ಮಹಾ
ರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ವಿಚಾರವಾಗಿ ವಿಧಾನಸಭೆಯಲ್ಲಿ ದೊಡ್ಡಮಟ್ಟದ ಚರ್ಚೆಗೆ ಕಾರಣವಾಗಿತ್ತು.
ಎಂಇಎಸ್ ಪುಂಡರು ರಾಯಣ್ಣ ವಿಗ್ರಹ ವಿರೂಪಗೊಳಿಸಿದ್ದರು. ಖಡ್ಗ ಮತ್ತು ಗುರಾಣಿ ಕಿತ್ತಾಕಿ ಮುಖದ ಮೇಲೆ ಮಸಿಬಳಿಯುವ ಕೆಲಸ ಮಾಡಿದ್ದರು. ಅಧಿವೇಶನದ ಸಂದರ್ಭದಲ್ಲೇ ಈ ಕೃತ್ಯ ಬೆಳಗಾವಿಯಲ್ಲಿ ಉದ್ವಿಗ್ನದ ವಾತಾವರಣ ಸೃಷ್ಟಿ ಮಾಡಿತ್ತು. ಅಷ್ಟೇ ಅಲ್ಲ, ರಾತ್ರೋರಾತ್ರಿ ಸರ್ಕಾರಿ ವಾಹನಗಳಿಗೂ ಪುಂಡರು ಹಾನಿ ಉಂಟು ಮಾಡಿದ್ದರು.
ಗಡಿ ಭಾಗದಲ್ಲಿ ಮರಾಠಿ ಶಾಲೆ ಸ್ಥಾಪನೆಗೆ ತಡೆ
ಕಳೆದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಪುಂಡಾಟಿಕೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲಾಗಿತ್ತು. ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆಗೆ ಹಾನಿ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ನಡೆದು, ಮೂರು ಪಕ್ಷದ ಸದಸ್ಯರು ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿದ್ದರು. ಸರ್ವಾನುಮತದಿಂದ ಈ ನಿರ್ಣಯವನ್ನು ಅಂಗೀಕಾರ ಮಾಡಲಾಗಿತ್ತು. ಈ ಮೂಲಕ ಎಂಇಎಸ್‍ಗೆ ಎಚ್ಚರಿಕೆಯ ಸಂದೇಶವನ್ನು ನೀಡಲಾಗಿತ್ತು.
ಇದೀಗ ಮತ್ತೊಮ್ಮೆ ಗಡಿ ವಿವಾದ ತೀವ್ರಗೊಂಡಿದೆ. ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‍ಗಳಿಗೆ ಹಾನಿಯುಂಟು ಮಾಡಿದ್ದಾರೆ. ಈ ಡಿಸೆಂಬರ್ 19ರಿಂದ ವಿಧಾನಮಂಡಲ ಅವೇಶನ ಆರಂಭಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಮತ್ತೊಮ್ಮೆ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಕನ್ನಡ ಬಾವುಟ ಹಾರಿಸಿದ ಯುವಕನಿಗೆ ಪೊಲೀಸ್ ಥಳಿತ : ತನಿಖೆಗೆ ಸಿಎಂ ಸೂಚನೆ
ಅೀಧಿವೇಶನ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಂದೋಬಸ್ತ್ ಕಾರ್ಯಯೋಜನೆ , ಸಿಬ್ಬಂದಿಗಳ ತಂಗುದಾಣದ ಸ್ಥಳ ಪರಿಶೀಲನೆ ಹಾಗೂ ಬಂದೋಬಸ್ತ್ ಪರಿಶೀಲಿಸಿ ಅೀಧಿನ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದ್ದಾರೆ.
ಅದಲ್ಲದೇ, ಮಹಾರಾಷ್ಟ್ರದಲ್ಲಿನಮ್ಮ ರಾಜ್ಯದ ಪ್ರವಾಸಿಗರು ಹಾಗೂ ವಾಹನಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಅಲ್ಲಿನ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಎರಡೂ ರಾಜ್ಯಗಳಲ್ಲಿ ಗಡಿಗೆ ಸಂಬಂಧಿಸಿದಂತೆ ಬಸ್‍ಗಳಿ ಮಸಿ, ಕಲ್ಲುತೂರುವ ಘಟನೆಗಳು ನಡೆದಿದೆ.
ಜಗತ್ತಿನ ಸೂಪರ್ ಪವರ್ ಪರಮಾಣು ರಾಷ್ಟ್ರವಾಗುತ್ತಾ ಉತ್ತರ ಕೊರಿಯಾ..?
ಸಾಂಗ್ಲಿಯಲ್ಲಿ ರಾಜ್ಯದ ಬಸ್‍ಗಳಿಗೆ ಕಲ್ಲುತೂರಿರುವುದು ಸೇರಿದಂತೆ ಒಟ್ಟು ಮೂರು ಕಡೆ ಇಂತಹ ಘಟನೆಗಳು ನಡೆದಿವೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಗಡಿ ಕುರಿತು ಬುಧವಾರ ಸರ್ವೋಚ್ಚ ನ್ಯಾಯಾಲಯ ವಿಚಾರಣೆ ನಡೆಸುವ ಸಂಭವವಿದ್ದು, ಎಲ್ಲಿಯೂ ಗಲಾಟೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚಿಸಲಾಗಿದೆ.
Winter Session belgaum Karnataka Maharashtra Dispute