Saturday, December 14, 2024
Homeರಾಷ್ಟ್ರೀಯ | Nationalಚಳಿಗಾಲದ ಅಧಿವೇಶನಕ್ಕೆ ಸಜ್ಜಾದ ನೂತನ ಸಂಸತ್

ಚಳಿಗಾಲದ ಅಧಿವೇಶನಕ್ಕೆ ಸಜ್ಜಾದ ನೂತನ ಸಂಸತ್

ನವದೆಹಲಿ,ನ.27- ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4ರಿಂದ 22ರವರೆಗೆ ನಡೆಯಲಿದ್ದು, ಇದು ಹೊಸ ಸಂಸತ್ ಕಟ್ಟಡದಲ್ಲಿ ಮೊದಲ ಪೂರ್ಣ ಅಧಿವೇಶನವಾಗಿದೆ. ಒಟ್ಟು 19 ದಿನಗಳ ಕಾಲ ನಡೆಯುವ ಸಂಸತ್ ಅಧಿವೇಶನದಲ್ಲಿ ದೇಶದ ಹಿತದೃ ಷ್ಟಿಯಿಂದ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಡಿ.2ರಂದು ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ.

ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿದ್ದರೂ, ಡಿ.3ರಂದು ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳ ಮತ ಎಣಿಕೆಯಿಂದಾಗಿ ಈ ಬಾರಿ ಒಂದು ದಿನ ಮುಂದೂಡಲಾಗಿದೆ. ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉತ್ಸುಕವಾಗಿರುವ ಅಧಿವೇಶನದ ಮೇಲೆ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪರಿಣಾಮ ಬೀರುವ ಸಂಭವವಿದೆ.

ಡಿಸಂಬರ್‌ನಲ್ಲಿ ಆಗಲಿವೆ ಹಲವಾರು ಮಹತ್ವದ ಬದಲಾವಣೆಗಳು

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ವಿರುದ್ಧದ ಪ್ರಶ್ನೆಗೆ ನಗದು ಆರೋಪದ ಕುರಿತು ನೈತಿಕ ಸಮಿತಿಯ ವರದಿಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ. ಸಮಿತಿಯು ಶಿಫಾರಸು ಮಾಡಿದ ಉಚ್ಚಾಟನೆ ಜಾರಿಗೆ ಬರುವ ಮೊದಲು ಸದನವು ವರದಿಯನ್ನು ಅಳವಡಿಸಿಕೊಳ್ಳಬೇಕಾಗುತ್ತದೆ.

ಈಗಾಗಲೇ ಲೋಕಸಭೆಯಲ್ಲಿ ಇಂಡಿಯನ್ ಪೀನಲ್ ಕೋಡ್ (ಭಾರತೀಯ ದಂಡ ಸಂಹಿತೆ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಅಪರಾಧ ಪ್ರಕ್ರಿಯಾ ಸಂಹಿತೆ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಇಂಡಿಯನ್ ಎವಿಡನ್ಸ್ ಆ್ಯಕ್ಟ್ (ಭಾರತೀಯ ಸಾಕ್ಷ್ಯ ಕಾಯ್ದೆ) ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು ಕೇಂದ್ರ ಸಚಿವಾಲಯವು ಮಂಡಿಸಿದೆ. ಇವುಗಳಿಗೆ ಅನುಮೋದನೆ ಪಡೆಯಲು ಅಧಿವೇಶನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ.

ಪ್ರತಿಪಕ್ಷಗಳು ಮತ್ತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪ್ರತಿಭಟನೆಯ ನಡುವೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅದನ್ನು ಅಂಗೀಕರಿಸಲು ಸರ್ಕಾರವು ಒತ್ತಾಯಿಸಲಿಲ್ಲ, ಏಕೆಂದರೆ ಸಿಇಸಿ ಮತ್ತು ಇಸಿಗಳ ಸ್ಥಾನಮಾನವನ್ನು ಕ್ಯಾಬಿನೆಟ್ ಕಾರ್ಯದರ್ಶಿಗೆ ಸಮಾನವಾಗಿ ತರಲು ಪ್ರಯತ್ನಿಸುತ್ತಿದೆ. ಪ್ರಸ್ತುತ ಅವರು ಸುಪ್ರೀಂಕೋರ್ಟ್ ನ್ಯಾಯಾೀಧಿಶರ ಸ್ಥಾನಮಾನವನ್ನು ಅನುಭವಿಸುತ್ತಿದ್ದಾರೆ.

ಸೆಪ್ಟೆಂಬರ್‍ನಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ನಡೆದು ಹಳೆಯ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಕಲಾಪಗಳು ಸ್ಥಳಾಂತರಗೊಂಡು ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು.

RELATED ARTICLES

Latest News