ಚಳಿಗಾಲದ ಅಧಿವೇಶನ: ಅಗತ್ಯ ಸೌಲಭ್ಯಗಳಿಗೆ ಸ್ಪೀಕರ್ ಸೂಚನೆ

Social Share

ಬೆಳಗಾವಿ,ಡಿ.12- ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದ್ದು, ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಮಂಡಳದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿಂದು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ, ಊಟ, ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಿದಾಗ ಇಡೀ ಅಧಿವೇಶನ ಸುಸೂತ್ರವಾಗಿ ನಡೆಯಲಿದೆ.

ಮುಖ್ಯ ಮಂತ್ರಿ, ಸಚಿವರು, ಶಾಸಕರು, ಉನ್ನತಮಟ್ಟದ ಅಧಿಕಾರಿಗಳು ಸೇರಿದಂತೆ ಇಡೀ ವ್ಯವಸ್ಥೆಯೇ ಇಲ್ಲಿ ಇರುವುದರಿಂದ ವಸತಿ, ಊಟೋಪಹಾರದ ಅತ್ಯುತ್ತಮ ಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಕೈ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

ರಾಜ್ಯದ ಬೇರೆ ಬೇರೆ ಭಾಗಗಳಿಂದ ಜನಪ್ರತಿನಿಧಿಗಳು, ಅಧಿಕಾರಿಗಳು/ಸಿಬ್ಬಂದಿ ಆಗಮಿಸುವುದರಿಂದ ಸರಳ ರೀತಿಯ ಹಾಗೂ ಗುಣಮಟ್ಟದ ಆಹಾರವನ್ನು ಕಲ್ಪಿಸಬೇಕು. ಸಾರಿಗೆ ವ್ಯವಸ್ಥೆಯು ಪ್ರಮುಖವಾಗಿದ್ದು, ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಹಾಗೂ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ವೈದ್ಯರು ಮತ್ತು ಸಿಬ್ಬಂದಿ ತಂಡವನ್ನು ನಿಯೋಜಿಸಬೇಕು. ಅಗತ್ಯಬಿದ್ದಲ್ಲಿ ಆಂಬ್ಯುಲೆನ್ಸ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೊಲೀಸ್ ಆಯುಕ್ತರಿಗೆ ಸಭಾಧ್ಯಕ್ಷರು ನಿರ್ದೇಶನ ನೀಡಿದರು.

ಕೆ.ಆರ್.ಪುರ ಶೂಟ್‍ಔಟ್ ಪ್ರಕರಣ: 3 ದಿನದ ಹಿಂದೆಯೇ ಹತ್ಯೆಗೆ ಸ್ಕೆಚ್

ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸುವುದರಿಂದ ಅವರಿಗೂ ಕೂಡ ಉತ್ತಮ ಊಟೋಪಹಾರ ಕಲ್ಪಿಸಬೇಕು. ಜನರ ಅಪೇಕ್ಷೆಯಂತೆ ಉತ್ತಮ ರೀತಿಯಲ್ಲಿ ಅಧಿವೇಶನ ನಡೆಸುವ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮನ್ನು ನಾವು ಭಾವನಾತ್ಮಕವಾಗಿ ತೊಡಗಿಸಿಕೊಳ್ಳಬೇಕಿದೆ. ಆದ್ದರಿಂದ ಎಲ್ಲರೂ ಸಹಕರಿಸಬೇಕು ಎಂದು ಕಾಗೇರಿ ಹೇಳಿದರು.

ಡಿ.21ರಿಂದ ವಾಜಪೇಯಿ ಕಪ್ ವಾಲಿಬಾಲ್ ಪಂದ್ಯಾವಳಿ

ಅಧಿವೇಶನಕ್ಕೆ ಸಂಬಂಧಿಸಿದಂತೆ ಏನಾದರೂ ಸಮಸ್ಯೆಗಳು ಅಥವಾ ತಾಂತ್ರಿಕ ತೊಂದರೆಗಳು ಇದ್ದಲ್ಲಿ ಇಲಾಖೆಗಳ ಮುಖ್ಯಸ್ಥರಿಗೆ ವರದಿ ನೀಡಬೇಕು. ಇದರಿಂದ ಸೂಕ್ತ ಕ್ರಮ ತೆಗೆದುಕೊಳ್ಳಲು ಅನುಕೂಲವಾಗುತ್ತದೆ ಎಂದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿವೇಶನ ಸಿದ್ಧತೆಗಾಗಿ ವಿವಿಧ ಸಮಿತಿಗಳ ರಚನೆ ಹಾಗೂ ಅವುಗಳ ಕಾರ್ಯನಿರ್ವಹಣೆ ಮತ್ತು ಸಿದ್ಧತೆಗಳ ಕುರಿತು ಮಾಹಿತಿಯನ್ನು ನೀಡಿದರು.

ಪೊಲೀಸ್ ಆಯುಕ್ತರಾದ ಎಂ.ಬಿ.ಬೋರ ಲಿಂಗಯ, ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ಜಿಪಂ ಸಿಇಒ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

WINTER SESSION, SPEAKER Kageri, Meeting, Officer, suvarna soudha, belagavi,

Articles You Might Like

Share This Article