ಬೆಂಗಳೂರು,ಜ.10- ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ಗೆ ಅಳವಡಿಸಿದ್ದ ಕಬ್ಬಿಣದ ಸಲಾಕೆಗಳು ಏಕಾಏಕಿ ಚಲಿಸುತ್ತಿದ್ದ ಆ್ಯಕ್ಟಿವ್ ಹೋಂಡಾ ಸ್ಕೂಟರ್ ಮೇಲೆ ಉರುಳಿಬಿದ್ದ ಪರಿಣಾಮ ತಾಯಿ-ಮಗು ಸಾವಿಗೀಡಾಗಿರುವ ದಾರುಣ ಘಟನೆ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಹೆಣ್ಣೂರಿನಲ್ಲಿರುವ ಡಿಎಕ್ಸ್ ಮ್ಯಾಕ್ಸ್ ಅಪಾರ್ಟ್ಮೆಂಟ್ನ ನಿವಾಸಿ ತೇಜಸ್ವಿನಿ(28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದಾರೆ. ಪತಿ ಲೋಹಿತ್ ಕುಮಾರ್ ಮತ್ತು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂಲತಃ ಧಾರವಾಡ ಜಿಲ್ಲೆಯ ತೇಜಸ್ವಿನಿ ಮತ್ತು ಲೋಹಿತ್ ಕುಮಾರ್ ಮಾನ್ಯತಾ ಟೆಕ್ಪಾರ್ಕ್ನಲ್ಲಿರುವ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಗೆ ಅವಳಿಜವಳಿ ಮಕ್ಕಳಿದ್ದರು.
ಪ್ರತಿದಿನ ದಂಪತಿ ಕೆಲಸಕ್ಕೆ ಹೋಗುವ ಮುನ್ನ ನಾಗವಾರದಲ್ಲಿರುವ ಪ್ಲೇ ಹೋಂಗೆ ಮಕ್ಕಳನ್ನು ಬಿಡುತ್ತಿದ್ದರು.
ಅದರಂತೆ ಇಂದು ಬೆಳಗ್ಗೆ 9.40ರ ಸುಮಾರಿನಲ್ಲಿ ಮಕ್ಕಳನ್ನು ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ನಾಗವಾರದ ಬಳಿ ಮೆಟ್ರೋ ಪಿಲ್ಲರ್ನ ಸರಳುಗಳು ಏಕಾಏಕಿ ಇವರ ಮೇಲೆ ಉರುಳಿ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡರು.
ಆಪ್ತರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ
ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ನಾಲ್ವರನ್ನು ಸಮೀಪದ ಆಲ್ಟಿಯಸ್ ಆಸ್ಪತ್ರೆಗೆ ದಾಖಲಿಸಿದರು. ಗಂಭೀರವಾಗಿ ಗಾಯಗೊಂಡಿದ್ದ ತಾಯಿ-ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮತ್ತೊಂದು ಮಗು ಹಾಗೂ ಪತಿ ಲೋಹಿತ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಟ್ರೋ ಸಿಬ್ಬಂದಿಗಳು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ದೌಡಾಯಿಸಿ ಪರಿಶೀಲಿಸಿದರು.
ಏರ್ಪೋರ್ಟ್ಗೆ ಸಂಪರ್ಕಿಸುವ ಮಾರ್ಗ:
ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಸುಮಾರು 37 ಕಿಲೋ ಮೀಟರ್ ಉದ್ದದ ಬ್ಲೂ ಲೈನ್ ಮಾರ್ಗದ ಕಾಮಗಾರಿಯನ್ನು ಎನ್ಸಿಸಿ ಕಂಪೆನಿ ನಡೆಸುತ್ತಿದೆ. ಈ ಮಾರ್ಗದಲ್ಲಿ ಲಕ್ಷಾಂತರ ವಾಹನಗಳು ಸಂಚರಿಸುತ್ತಿದ್ದ ಸರಿಯಾದ ಸುರಕ್ಷತಾ ಕ್ರಮಗಳನ್ನು ನಮ್ಮ ಮೆಟ್ರೋ ಪಾಲಿಸದಿರುವ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಕೂಡ ಆರೋಪಗಳು ಕೇಳಿಬಂದಿದ್ದು, ಪಿಲ್ಲರ್ ನಿರ್ಮಾಣಕ್ಕೆ ಸರಳುಗಳನ್ನು ಕಟ್ಟಿದ ನಂತರ ಅದನ್ನು ಸರಿಯಾಗಿ ನಿಲ್ಲಿಸದೇ ಮತ್ತು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಇರುವುದರಿಂದ ರಸ್ತೆ ಕಡೆಗೆ ವಾಲಿದೆ ಎಂದು ಆರೋಪಿಸಲಾಗಿದೆ.
ಒಂದೇ ವಾರದಲ್ಲಿ ರಾಜ್ಯಕ್ಕೆ 2 ಬಾರಿ ಆಗಮಿಸಲಿರೋ ಮೋದಿ , ಬಿಜೆಪಿಯಲ್ಲಿ ಸಂಚಲನ
ಪ್ರಸ್ತುತ ಗೋವಿಂದರಾಜಪುರ ಪೊಲೀಸರು ನಮ್ಮ ಮೆಟ್ರೋದ ಎಂಜಿನಿಯರ್ ಕಾಮಗಾರಿ ನಡೆಸುತ್ತಿದ್ದ ಸಂಸ್ಥೆ ಹಾಗೂ ಕಾರ್ಮಿಕರ ಉಸ್ತುವಾರಿ ವಹಿಸಿಕೊಂಡಿದ್ದವರು ಸೇರಿದಂತೆ ಹಲವರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಳೆದ 2021ರಲ್ಲಿ ಕಾಮಗಾರಿ ಆರಂಭಿಸಲಾಗಿದ್ದು, 27 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ನೀಡಲಾಗಿತ್ತು. ಸಾವಿರಾರು ಕೋಟಿ ವೆಚ್ಚದ ಈ ಕಾಮಗಾರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.
Woman, child, die, metro pillar, collapses, Bengaluru,