ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

Social Share

ಬೆಳಗಾವಿ/ಸವದತ್ತಿ, ನ.19- ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಶಿಕಲಾ (32), ಮಕ್ಕಳಾದ ಸುದೀಪ್ (4), ರಾಕಾ (3) ಮೃತ ದುರ್ದೈವಿಗಳು.

ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿ ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಪುತ್ರಿ

ಎರಡು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ ತಾನೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮೋದಿಯಂತಹ ನಾಯಕನಿಲ್ಲದಿದ್ದರೆ ನಗರಕ್ಕೊಬ್ಬ ಅಫ್ತಾಬ್ ಹುಟ್ಟುತ್ತಾನೆ”

ಜಲಾಶಯದ ಹಿನ್ನೀರಿನಲ್ಲಿ ಮೂವರ ಶವಗಳು ಪತ್ತೆಯಾಗಿವೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವಗಳನ್ನು ಮೇಲೆತ್ತಿ ಮುಂದಿನ ಕ್ರಮ ಜರುಗಿಸಲಾಗಿದೆ.

Articles You Might Like

Share This Article