Wednesday, December 4, 2024
Homeರಾಷ್ಟ್ರೀಯ | Nationalಆಗ್ರಾ ಹೋಟೆಲ್‍ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಆಗ್ರಾ ಹೋಟೆಲ್‍ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಆಗ್ರಾ,ನ.13- ಉತ್ತರಪ್ರದೇಶದಲ್ಲೋಂದು ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಆಗ್ರಾದ ಹೋಟೆಲ್‍ವೊಂದರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಡರಾತ್ರಿ ಸಂತ್ರಸ್ತೆಯಿಂದ ತಮಗೆ ಕರೆ ಬಂದಿದ್ದು, ನಂತರ ನಾವು ಹೋಂಸ್ಟೇಗೆ ಧಾವಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಜ್‍ಗಂಜ್ ಪೊಲೀಸರಿಗೆ ಶ್ರೀಮಂತ ಹೋಂಸ್ಟೇಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ಕರೆ ಬಂದಿತು.

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಎಸಿಪಿ ಅರ್ಚನಾ ಸಿಂಗ್ ತಿಳಿಸಿದ್ದಾರೆ. ಘಟನೆ ವರದಿಯಾದ ನಂತರ ಒಬ್ಬ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಆಗ್ರಾ ಪೊಲೀಸರು ತಿಳಿಸಿದ್ದಾರೆ.

ರಿಷಿ ಸುನಕ್ ದಂಪತಿ ಜೊತೆ ಜೈಶಂಕರ್ ದಂಪತಿ ದೀಪಾವಳಿ ಸಂಭ್ರಮ

ಹಲ್ಲೆಗೊಳಗಾದವರು ಹೋಟೆಲ್ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ವೈರಲ್ ವೀಡಿಯೊ ಸಂತ್ರಸ್ತೆಯ ಮೇಲೆ ಪುರುಷರ ಗುಂಪೊಂದು ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ. ಘಟನೆಯ ನಂತರ ನಾಲ್ವರು ಪುರುಷರು ಮತ್ತು ಮಹಿಳೆಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗುವುದು ಮತ್ತು ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಗ್ರಾ ಸದರ್‍ನ ಸಹಾಯಕ ಪೊಲೀಸ್ ಆಯುಕ್ತ ಅರ್ಚನಾ ಸಿಂಗ್ ತಿಳಿಸಿದ್ದಾರೆ.

ಈ ಸಂಬಂಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಾಯ್ದೆಯಡಿ ಅತ್ಯಾಚಾರ, ಹಲ್ಲೆ ಮತ್ತು ಇತರ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

RELATED ARTICLES

Latest News