ಶ್ರೀನಗರ, ಮೇ.9-ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಪಾಕಿಸ್ತಾನಿ ಪಡೆಗಳು ಭಾರೀ ಶೆಲ್ ದಾಳಿ ನಡೆಸಿದ ಪರಿಣಾಮವಾಗಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಅವರ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ.
ಪಾಕಿಸ್ತಾನಿ ಆಕ್ರಮಣಕ್ಕೆ ಭಾರತೀಯ ಸೇನೆಯು ಸೂಕ್ತ ಪ್ರತಿಕ್ರಿಯೆ ನೀಡಿದೆ ಎಂದು ಅವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನಿ ಪಡೆಗಳು ಎಲ್‌ಸಿ ಉದ್ದಕ್ಕೂ ಕದನ ವಿರಾಮವನ್ನು ಉಲ್ಲಂಘಿಸಿ ಕಳೆದ ರಾತ್ರಿ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿರುವ ನಾಗರಿಕ ಪ್ರದೇಶಗಳ ಮೇಲೆ ಭಾರೀ ಶೆಲ್ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನವು ಸಿಲಿಕೋಟ್, ಬೋನಿಯಾರ್, ಕಮಲ್‌ಕೋಟ್, ಮೊಹ್ರಾ ಮತ್ತು ಜಿಂಗಲ್ ಸೇರಿದಂತೆ ಉರಿಯ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಭಾರೀ ಶೆಲ್ ದಾಳಿನಡೆಸಿದ ಪರಿಣಾಮ ಹಲವಾರು ಮನೆಗಳು ಹಾನಿಯಾಗಿದ್ದು,ಜನರು ಅಲ್ಲಿಂದ ಪಲಾಯನ ಮಾಡಬೇಕಾಯಿತು ಎಂದು ಅಧಿಕಾರಿಗಳು ಹೇಳಿದರು.
ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಮೊಹ್ರಾ ಬಳಿ ಶೆಲ್ ಅವರ ಕಾರಿಗೆ ಡಿಕ್ಕಿ ಹೊಡೆದು ಒಂದು ಕುಟುಂಬದ ಮೂವರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ನರ್ಗಿಸ್ ಬೇಗಂ ಎಂದು ಗುರುತಿಸಲಾದ ಮಹಿಳೆ ಸಾವನ್ನಪ್ಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.