ಮಕ್ಕಳಾಗಲಿಲ್ಲವೆಂದು ರುಬ್ಬುಕಲ್ಲಿನಿಂದ ಜಜ್ಜಿ ಮಹಿಳೆಯ ಕೊಲೆ

Social Share

ವಿಜಯನಗರ,ನ.19- ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಮಹಿಳೆ ಬಾಯಿಗೆ ಬಟ್ಟೆ ತುರುಕಿ ರುಬ್ಬುಕಲ್ಲಿನಿಂದ ಆಕೆಯ ಪತಿ ಹಾಗೂ ಕುಟುಂಬಸ್ಥರೇ ಜಜ್ಜಿ ಕೊಲೆ ಮಾಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಈರಮ್ಮ ಕೊಲೆಯಾದ ದುರ್ದೈವಿ. 11 ವರ್ಷಗಳ ಹಿಂದೆ ಪಟ್ಟಣದಲ್ಲಿ ಫೋಟೋಗ್ರಾಫರ್ ಆಗಿದ್ದು, ಆನಂದ ಎಂಬುವರೊಂದಿಗೆ ಈರಮ್ಮನ ವಿವಾಹವಾಗಿತ್ತು.

ಮಕ್ಕಳಾಗಲಿಲ್ಲವೆಂದು ಆತನ ಮನೆಯವರು ದಿನನಿತ್ಯ ಕಿರುಕುಳ ನೀಡುತ್ತಿದ್ದರು. ನ.16-18ರಂದು ಮೂರು ದಿನಗಳವರೆಗೆ ಈರಮ್ಮಗೆ ಹೊಡೆದು ನಂತರ ರುಬ್ಬುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಪೋಲೀಸರಿಗೆ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಪುತ್ರಿ

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಿ.ಹರೀಶ್, ಸರ್ಕಲ್ ಇನ್‍ಸ್ಪೆಕ್ಟರ್ ಸೋಮಶೇಖರ್, ಎಚ್.ಕೆಂಬಾರೆಡ್ಡಿ, ಸಬ್‍ಇನ್‍ಸ್ಪೆಕ್ಟರ್ ಜೆ.ಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಆರೋಪಿಗಳನ್ನು ವಶಕ್ಕೆ ಪಡೆದು ಪೋಲೀಸರು ತನಿಖೆ ಕೈಗೊಂಡಿದ್ದಾರೆ.

“ಮೋದಿಯಂತಹ ನಾಯಕನಿಲ್ಲದಿದ್ದರೆ ನಗರಕ್ಕೊಬ್ಬ ಅಫ್ತಾಬ್ ಹುಟ್ಟುತ್ತಾನೆ”

woman, murdered, husband, family,

Articles You Might Like

Share This Article