ಭುವನೇಶ್ವರ,ಅ.26- ಭಾವಿ ಪತಿ ಎದುರಿನಲ್ಲೇ ಮಹಿಳೆಯೊಬ್ಬರ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ನಯಾಗಢ್ ಜಿಲ್ಲೆಯ ಕಾಡಿನಲ್ಲಿ ನಡೆದಿದೆ.
21 ವರ್ಷದ ಮಹಿಳೆಯೊಬ್ಬಳ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಆಕೆಯ ಭಾವಿ ಪತಿ ಎದುರಿನಲ್ಲೇ ಇಂತಹ ಕೃತ್ಯ ನಡೆಸಲಾಗಿದೆ ಎಂದು -ಫತೇಗಢ ಪೊಲೀಸರು ತಿಳಿಸಿದ್ದಾರೆ. ಮಹಿಳೆ, ತನ್ನ ನಿಶ್ಚಿತ ವರನ ಜೊತೆಗೆ ಸಂಜೆ -ಫತೇಗಢ್ ರಾಮ ಮಂದಿರಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
ಮೂವರು ಅಪರಿಚಿತ ವ್ಯಕ್ತಿಗಳು ಪಿತಾಖೈ ಅರಣ್ಯದ ಬಳಿ ಇಬ್ಬರನ್ನು ಅಡ್ಡಗಟ್ಟಿ ಬಲವಂತವಾಗಿ ಕಾಡಿಗೆ ಕರೆದೊಯ್ದು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಮತ್ತು ಆಕೆಯು ತನ್ನ ನಿಶ್ಚಿತ ವರನಿಗೆ ಚಾಕುವಿನಿಂದ ಬೆದರಿಸಿದ್ದಾರೆ ಎಂದು ಖಂಡಪದ ಉಪವಿಭಾಗದ ಪೊಲೀಸ್ ಅಧಿಕಾರಿ ಬಿಮಲ್ ಕುಮಾರ್ ಬಾರಿಕ್ ಪಿಟಿಐಗೆ ತಿಳಿಸಿದ್ದಾರೆ. ಆರೋಪಿ ವ್ಯಕ್ತಿಗಳು ಘಟನೆಯನ್ನು ಮೊಬೈಲ್ -ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಬಾರಿಕ್ ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಆಕೆಯ ವೈದ್ಯಕೀಯ ಪರೀಕ್ಷೆಯನ್ನು ಸಹ ಮಾಡಲಾಗುವುದು ಎಂದು ಅವರು ಹೇಳಿದರು