Monday, May 6, 2024
Homeರಾಷ್ಟ್ರೀಯಮಧ್ಯರಾತ್ರಿ ಮನೆಗೆ ನುಗ್ಗಿ ಪಕ್ಕದ್ಮನೆ ಮಹಿಳೆ ಮೇಲೆ ಅತ್ಯಾಚಾರ

ಮಧ್ಯರಾತ್ರಿ ಮನೆಗೆ ನುಗ್ಗಿ ಪಕ್ಕದ್ಮನೆ ಮಹಿಳೆ ಮೇಲೆ ಅತ್ಯಾಚಾರ

ಅಮೇಥಿ, ಏ. 10 (ಪಿಟಿಐ) : ಮಧ್ಯರಾತ್ರಿ ಟೆರೆಸ್ ಮೂಲಕ ಪಕ್ಕದ ಮನೆಗೆ ನುಗ್ಗಿ ನಿದ್ರಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಅಮೇಥಿಯಲ್ಲಿ ನಡೆದಿದೆ. 20 ವರ್ಷದ ಮಹಿಳೆಯ ಮೇಲೆ ಟೆರೇಸ್ ಮೂಲಕ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕುಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಸಲ್ಮಾನ್ ವಿರುದ್ಧ FIR ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಟೆರೇಸ್ ಮೂಲಕ ಮಹಿಳೆಯ ಮನೆಗೆ ನುಗ್ಗಿದ ಸಲ್ಮಾನ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಮಹಿಳೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಸಲ್ಮಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಸರ್ಕಲ್ ಆಫೀಸರ್ ಅತುಲ್ ಸಿಂಗ್ ಹೇಳಿದ್ದಾರೆ.ಅತ್ಯಾಚಾರ ನಡೆಸಿ ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

RELATED ARTICLES

Latest News