ಮಹಿಳೆಯ ಕೈ-ಕಾಲು ಕಟ್ಟಿ ದರೋಡೆ ಮಾಡಿದ್ದ ನಾಲ್ವರು ಬಲೆಗೆ

Social Share

ಬೆಂಗಳೂರು,ಜ.10- ಮನೆಗೆ ನುಗ್ಗಿ ವೈದ್ಯೆಯ ತಾಯಿಗೆ ಕೈ-ಕಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಸುತ್ತಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಕಳೆದ ಜ.3ರಂದು ವೈದ್ಯೆ ವೈಷ್ಣವಿ ಎಂದಿನಂತೆ ತಮ್ಮ ಕ್ಲಿನಿಕ್‍ಗೆ ಹೋಗಿದ್ದಾಗ ಮನೆಗೆ ನುಗ್ಗಿದ ದರೋಡೆಕೋರರು ಒಬ್ಬಂಟಿಯಾಗಿದ್ದ ವೈದ್ಯೆಯ ತಾಯಿಯನ್ನು ಬೆದರಿಸಿ ಕೈ-ಕಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ಹಣ, ಆಭರಣ ದರೋಡೆ ಮಾಡಿ ಪರಾರಿಯಾಗಿದ್ದರು.

ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿ ಘಟನೆ ಸುತ್ತಮುತ್ತಲಿನ ಸಿಸಿ ಟಿವಿಗಳನ್ನು ಪರಿಶೀಲಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದರು.

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು..!

ಈ ವೇಳೆ ವೈದ್ಯೆಯ ಮನೆಗೆ ಕೆಲಸಕ್ಕೆ ಬರುತ್ತಿದ್ದಾಕೆಯ ತಂದೆ ಕಳ್ಳತನ ನಡೆಸಿದ್ದಾನೆ ಎಂಬುದು ಗೊತ್ತಾಗಿದೆ. ದರೋಡೆ ಪ್ರಕರಣದ ಪ್ರಮುಖ ಆರೋಪಿ ನಟರಾಜ್ ವೈದ್ಯೆಯ ಮನೆಯಲ್ಲಿ ಕೆಲಸ ಮಾಡುತ್ತಿದ್ದ ತನ್ನ ಮಗಳನ್ನು ಮಾತನಾಡಿಸಲೆಂದು ಆಗಾಗ ಬಂದು ಹೋಗುತ್ತಿದ್ದ.

ಈ ವೇಳೆ ಮನೆಯಲ್ಲಿ ತಾಯಿ ಮತ್ತು ಮಗಳು ಮಾತ್ರ ಇರುವುದು ಎಂಬುದನ್ನು ಅರಿತುಕೊಂಡು, ದರೋಡೆ ಮಾಡಲು ಯೋಜನೆ ರೂಪಿಸಿಕೊಂಡಿದ್ದಾನೆ. ವೈದ್ಯೆಯ ಮನೆಯಲ್ಲಿ ದರೋಡೆ ಮಾಡಲೆಂದು ತನ್ನ ಜೊತೆ ಮೂವರನ್ನು ಕರೆದುಕೊಂಡು ಬಂದಿದ್ದಾನೆ.

ಮೊದಲ ಪತ್ನಿ ಕೊಂದು ನಾಟಕವಾಡಿದ್ದನಾ ಸ್ಯಾಂಟ್ರೋ ರವಿ..?

ನಂತರ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೃದ್ಧೆಯ ಕೈ-ಕಾಲು ಕಟ್ಟಿ ನಾಲ್ಕು ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಮೂರೂವರೆ ಲಕ್ಷ ರೂ ನಗದನ್ನು ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಹಣ, ಆಭರಣ ವಶಪಡಿಸಿಕೊಂಡಿದ್ದಾರೆ.

woman, robbed, Four, arrested,

Articles You Might Like

Share This Article