ಜಮ್ಶೆಡ್ಪುರ, ಡಿ 11 (ಪಿಟಿಐ) ತಾನೇ ಜನ ನೀಡಿದ ಹೆಣ್ಣು ಶಿಶುವನ್ನು ತಾಯಿಯೊಬ್ಬರು ನದಿಗೆ ಎಸೆದಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಹೆಣ್ಣು ಮಗುವನ್ನು ನದಿಗೆ ಎಸೆದಿದ್ದು, ಶಿಶು ಸಾವಿಗೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಜದುಗೋರಾದ ದುರ್ಕು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ 30 ವರ್ಷದ ಮಹಿಳೆ ತನ್ನ ಮಗುವಿನೊಂದಿಗೆ ಸಮೀಪದ ನದಿಗೆ ಸ್ನಾನಕ್ಕೆ ತೆರಳಿದ್ದರು ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಆಕೆ ತನ್ನ ಹೆಣ್ಣು ಶಿಶುವನ್ನು ನದಿಗೆ ಎಸೆದು ಹತ್ಯೆ ಮಾಡಿದ್ಧಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಮುಸಾಬಾನಿ) ಸಂದೀಪ್ ಭಗತ್ ತಿಳಿಸಿದ್ದಾರೆ.
ಮಹಿಳೆಯ ಪತಿ ಈ ಬಗ್ಗೆ ಎಫ್ಐಆರ್ ದಾಖಲಿಸಿದ್ದಾರೆ, ಆಕೆಯ ಕತ್ಯದ ಹಿಂದಿನ ನಿಖರವಾದ ಕಾರಣ ತಕ್ಷಣವೇ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ಆಕೆಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಭಗತ್ ಹೇಳಿದ್ದಾರೆ