Wednesday, April 30, 2025
Homeಬೆಂಗಳೂರುಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Woman's body found in burnt condition near Yeshwantpur railway station

ಬೆಂಗಳೂರು,ಮಾ.19– ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 35ರಿಂದ 40 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ ನಂತರ ಶವಕ್ಕೆ ಬೆಂಕಿ ಹಚ್ಚಿ ಗೋಣಿ ಚೀಲದಲ್ಲಿ ತಂದು ಫ್ಲಾಟ್‌ಪಾರಂ-1ರ ಸಮೀಪ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಸುದ್ದಿ ತಿಳಿದು ಯಶವಂತಪುರ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಮಹಿಳೆ ಯಾರು, ಯಾವ ಕಾರಣಕ್ಕಾಗಿ ಈ ಮಹಿಳೆಯನ್ನು ಯಾರು ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ರೈಲ್ವೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

RELATED ARTICLES

Latest News