Friday, April 4, 2025
Homeಜಿಲ್ಲಾ ಸುದ್ದಿಗಳು | District Newsಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಚೇಳೂರು,ಏ.2- ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಶಿವಸಂದ್ರ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಸುಮಾರು 25 ವರ್ಷದ ವಿವಾಹಿತ ಮಹಿಳೆಯನ್ನು ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಗುರುತು ಸಿಗದ ಹಾಗೆ ಸುಟ್ಟುಹಾಕಿದ್ದಾರೆ ಎನ್ನಲಾಗಿದೆ.

ಮೃತಮಹಿಳೆಯ ಕೊರಳಿನಲ್ಲಿ ತಾಳಿ, ಕಾಲುಂಗುರ, ಬಳೆಗಳು ಮಾತ್ರ ದೊರೆತಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಕುತ್ತಿಗೆಗೆ ವೇಲಿನಿಂದ ಬಿಗಿದು ಕೊಲೆ ಮಾಡಿ ಸುಟ್ಟು ಹಾಕಲಾಗಿದೆ ಎಂದು ಶಂಕಿಸಲಾಗಿದೆ.

ಶವವನ್ನು ಕಂಡ ಸ್ಥಳೀಯರು ಚೇಳೂರು ಪೊಲೀಸರಿಗೆ ಸುದ್ದಿ ತಿಳಿಸಿದ್ದು, ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಅಶೋಕ್ ಹಾಗೂ ಶಿರಾ ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

RELATED ARTICLES

Latest News