Thursday, December 12, 2024
Homeಜಿಲ್ಲಾ ಸುದ್ದಿಗಳು | District Newsಬಳ್ಳಾರಿಯ ವಿಮ್ಸ್‌ನಲ್ಲಿ ಬಾಣಂತಿ ಸಾವು ಪ್ರಕರಣ : ತನಿಖೆ ನಡೆಸಿ ವರದಿ ನೀಡಲು ಸೂಚನೆ

ಬಳ್ಳಾರಿಯ ವಿಮ್ಸ್‌ನಲ್ಲಿ ಬಾಣಂತಿ ಸಾವು ಪ್ರಕರಣ : ತನಿಖೆ ನಡೆಸಿ ವರದಿ ನೀಡಲು ಸೂಚನೆ

Women die in VIMS Hospital

ಬೆಂಗಳೂರು,ನ.28– ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಬಳಿ ಮಾಹಿತಿ ಪಡೆದ ಸಚಿವರು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

ಈ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ್ದ ನಾಲ್ಕು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ಮಹಾಲಕ್ಷ್ಮೀ ಎಂಬುವರು ವಿಮ್ಸೌಗೆ ನ. 24 ರಂದು ದಾಖಲಾಗಿದ್ದು, ನ.26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಆರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿ ದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

RELATED ARTICLES

Latest News