Saturday, September 23, 2023
Homeಇದೀಗ ಬಂದ ಸುದ್ದಿಮಹಿಳಾ ಮೀಸಲಾತಿ ವಿಧೇಯಕಯನ್ನು ಸ್ವಾಗತಿಸಿದ ಮಾಜಿ ಪ್ರಧಾನಿ ದೇವೇಗೌಡರು

ಮಹಿಳಾ ಮೀಸಲಾತಿ ವಿಧೇಯಕಯನ್ನು ಸ್ವಾಗತಿಸಿದ ಮಾಜಿ ಪ್ರಧಾನಿ ದೇವೇಗೌಡರು

- Advertisement -

ಬೆಂಗಳೂರು, ಸೆ.19-ಸಂಸತ್ತಿನ ಹೊಸ ಭವನದಲ್ಲಿ ನಡೆಯುವ ಅಧಿವೇಶನದಲ್ಲಿ ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿ ಕಲ್ಪಿಸುವ ವಿಧೇಯಕ ಮಂಡನೆಯಾಗುವುದು ಮೊದಲ ಉತ್ತಮ ಕಾರ್ಯವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಶ್ಲಾಘಿಸಿದ್ದಾರೆ.

ಮಹಿಳಾ ಮೀಸಲಾತಿ ವಿಧೇಯಕವನ್ನು ಲೋಕಸಭೆಯಲ್ಲಿ ಮರು ಮಂಡಿಸಲು ಪರಿಗಣಿಸುವಂತೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿದ್ದ ಪತ್ರವನ್ನು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ 1996ರಲ್ಲೇ ಮಹಿಳಾ ಮೀಸಲು ವಿಧೇಯಕ ಮಂಡನೆ ಮಾಡುವುದನ್ನು ಕೈಗೆತ್ತಿಕೊಂಡಿದ್ದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

- Advertisement -

ಭಾರತೀಯ ಚುನಾವಣಾ ಆಯೋಗವು ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯನ್ನು ಘೋಷಿಸಿ ರಾಜ್ಯದಲ್ಲಿ ಅರ್ಹ ಮಹಿಳಾ ಮತದಾರರ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಒಟ್ಟು ಮತದಾರರಲ್ಲಿ ಸುಮಾರು ಶೇ. ಐವತ್ತರಷ್ಟು ಮಹಿಳಾ ಮತದಾರರಿದ್ದರೆ ಆಶ್ಚರ್ಯವೇನಿಲ್ಲ. ಭಾರತದ ಇತರ ರಾಜ್ಯಗಳಲ್ಲಿನ ಅಂಕಿ-ಅಂಶಗಳು ಇದಕ್ಕಿಂತ ಭಿನ್ನವಾಗಿಲ್ಲ. ಇದು ಶಾಸಕಾಂಗ ಸಭೆಗಳು ಮತ್ತು ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿಯ ಕಲ್ಪನೆಯನ್ನು ಮರುಪರಿಶೀಲಿಸುವಂತೆ ಮಾಡಿದೆ ಎಂದು ಪ್ರಧಾನಿ ಅವರಿಗೆ ಬರೆದಿದ್ದ ಪತ್ರದಲ್ಲಿ ಗೌಡರು ಪ್ರಸ್ತಾಪಿಸಿದ್ದರು.

ಹೊಸ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ನಾನು 1996ರಲ್ಲಿ ಪ್ರಧಾನ ಮಂತ್ರಿಯಾಗಿ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿಗೆ ತಂದಿದ್ದರೂ ವಿಧೇಯಕ ಅಂಗೀಕಾರ ಪಡೆಯಲು ಯಶಸ್ವಿಯಾಗಲಿಲ್ಲ. ನಾನು 1995ರಲ್ಲಿ ಪ್ರಧಾನ ಮಂತ್ರಿ ಪಿ.ವಿ. ನರಸಿಂಹರಾವ್ ಅವರೊಂದಿಗೆ ಮುಖ್ಯಮಂತ್ರಿಯಾಗಿಯೂ ಮಹಿಳಾ ಮೀಸಲಾತಿಗೆ ಒತ್ತಾಯಿಸಿದ್ದೆ. ನಂತರ 2008ರಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಮಾಡಿದ ಪ್ರಯತ್ನಗಳು ತಾರ್ಕಿಕ ಅಂತ್ಯವನ್ನು ತಲುಪಲಿಲ್ಲ.

ಎರಡೂ ಬಾರಿ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಿದಾಗ, ಸರ್ಕಾರಗಳು ಬಹುಮತವನ್ನು ಹೊಂದಿರಲಿಲ್ಲ. ಅಲ್ಲದೆ, ತಮ್ಮ ಸಮ್ಮಿಶ್ರ ಪಾಲುದಾರರ ಮೇಲೆ ಅವಲಂಬಿತವಾಗಿದ್ದವು. ನೀವು ಸಂಸತ್ತಿನಲ್ಲಿ ಬಹುಮತವನ್ನು ಹೊಂದಲು ಅದೃಷ್ಟವಂತರು ಮತ್ತು ಅದನ್ನು ಅಂಗೀಕರಿಸುವಲ್ಲಿ ಯಶಸ್ವಿಯಾಗಬಹುದು ಎಂದು ದೇವೇಗೌಡರು ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದರು.

2024ರಲ್ಲಿ ಲೋಕಸಭೆಗೆ ನಡೆಯುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಪ್ರಧಾನಿ ಅವರನ್ನು ಒತ್ತಾಯಿಸಿದ್ದರು. 1996 ಮತ್ತು 2008 ರಲ್ಲಿ ಮಂಡಿಸಲಾದ ಮಸೂದೆಯ ಕರಡುಗಳಿಗೆ ಸೂಕ್ತವಾದ ಮಾರ್ಪಾಡುಗಳನ್ನು ಮಾಡಬಹುದು. ಸಾಮಾಜಿಕ ನ್ಯಾಯದ ತತ್ವಗಳಿಗೆ ಬದ್ಧವಾಗಿರುವುದು ಲಿಂಗ ಸಮಾನ ನ್ಯಾಯಕ್ಕಾಗಿ ಈ ಮಹತ್ತರವಾದ ವಿಧೇಯಕದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು.

ಖಲಿಸ್ತಾನಿ ಉಗ್ರನ ಹತ್ಯೆ ವಿಚಾರ: ಕೇಂದ್ರಕ್ಕೆ ಬೆಂಬಲ ನೀಡಿದ ಕಾಂಗ್ರೆಸ್

ಶಾಸನ ಸಭೆಗಳು ಮತ್ತು ಸಂಸತ್ತಿನಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿಯನ್ನು ನೀಡುವ ಈ ಮಸೂದೆಯನ್ನು ತರುವುದು ಮತ್ತು ಅದನ್ನು ಅಂಗೀಕರಿಸುವುದು ಸಾಂಕೇತಿಕ ಸೂಚಕವಾಗಿದೆ. ನಾವು ಹೊಸ ಮತ್ತು ಅತ್ಯಂತ ಆಧುನಿಕ ಸಂಸತ್ತಿನ ಕಟ್ಟಡದಲ್ಲಿ ನಡೆಯುವ ಅವೇಶನದಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರು ಈ ಮೀಸಲಾತಿಗೆ ಉತ್ತಮ ಅರ್ಹರು ಎಂದು ಹೇಳಿದ್ದಾರೆ.

Women, #ReservationBill, #FormerPrimeMinister, #DeveGowda,

- Advertisement -
RELATED ARTICLES
- Advertisment -

Most Popular