ವಿಶ್ವ ಬಂಡವಾಳ ಹೂಡಿಕೆ ಸಮಾವೇಶ : ಮುಂದಿನ 5 ವರ್ಷಗಳಲ್ಲಿ ಶೇ.75ರಷ್ಟು ಯೋಜನೆ ಅನುಷ್ಠಾನ

Social Share

ಬೆಂಗಳೂರು,ಡಿ. 6- ಜಾಗತೀಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳು ಮುಂದಿನ 5 ವರ್ಷಗಳಲ್ಲಿ ಶೇ. 75ರಷ್ಟು ಅನುಷ್ಠಾನಕ್ಕೆ ಬರಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಹೇಳಿದ್ದಾರೆ.

ಬೆಂಗಳೂರು ಪ್ರೆಸ್ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾವು ಕೇವಲ ಬಂಡವಾಳ ಹೆಚ್ಚಿಸಿಕೊಳ್ಳಲು ಅಂಕಿ-ಸಂಖ್ಯೆಗಳನ್ನು ತೋರಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿಲ್ಲ. ಯೋಜನೆಗಳನ್ನು ರಾಜ್ಯದಲ್ಲಿ ಪ್ರಾರಂಭಿಸುವವರಿಗೆ ಮಾತ್ರ ಒಪ್ಪಿಗೆ ಕೊಟ್ಟಿದ್ದೇವೆ. ಇನ್ನು 5 ವರ್ಷದೊಳಗೆ ಶೇ. 75ರಷ್ಟು ಎಂಒಯು ಅನುಷ್ಠಾನಕ್ಕೆ ಬರಲಿವೆ ಎಂದು ತಿಳಿಸಿದರು.

ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು 9.81784 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಿವೆ. ಉದ್ದಿಮೆಗಳಿಗೆ ಬೇಕಾದ ನೀರು, ಭೂಮಿ, ವಿದ್ಯುತ್, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಈಗಾಗಲೇ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಮಿತಿಯನ್ನು ರಚಿಸಿದ್ದೇವೆ. ಇದು ನಮ್ಮ ನಿರೀಕ್ಷೆಯೂ ಮೀರಿ ಅನುಷ್ಠಾನವಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದರೂ ನಾವು ಅವರ ಜೊತೆ ಎಂಒಯು ಮಾಡಿಕೊಂಡಿಲ್ಲ. ಈಗಾಗಲೇ ಮಾಡಿಕೊಂಡಿರುವ ಎಂಓಯುಗಳಿಗೆ ಆದ್ಯತೆ ಕೊಡುತ್ತೇವೆ. ಕೇವಲ ಅಂಕಿ-ಸಂಖ್ಯೆಗಳನ್ನು ಹೆಚ್ಚಿಸಲು ಒಪ್ಪಂದ ಮಾಡಿಕೊಳ್ಳುವ ಪ್ರವೃತ್ತಿ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೈಗಾರಿಕಾ ಉದ್ದೇಶಗಳಿಗೆ ನಾವು ಯಾವುದೇ ಒಬ್ಬ ರೈತರಿಂದಲೂ ಬಲವಂತವಾಗಿ ಜಮೀನನ್ನು ಭೂಸ್ವಾದೀನ ಮಾಡಿಕೊಳ್ಳುತ್ತಿಲ್ಲ. ಸ್ವಯಂಪ್ರೇರಿತರಾಗಿ ಯಾರು ಜಮೀನು ಕೊಡಲು ಬರುತ್ತಾರೋ ಅಂತಹವರಿಗೆ ಮಾತ್ರ ಸ್ವಾೀನಪಡಿಸಿಕೊಳ್ಳುತ್ತಿದ್ದೇವೆ. ಕೃಷಿಯೋಗ್ಯ ಜಮೀನನ್ನು ಸ್ವಾೀನಪಡಿಸಿಕೊಳ್ಳುವುದಿಲ್ಲ ಎಂದು ಸಚಿವ ನಿರಾಣಿಯವರು ಸ್ಪಷ್ಟಪಡಿಸಿದ್ದರು.

ಕೆಲವು ಕಡೆ ರೈತರು ಸ್ವಯಂಪ್ರೇರಿತರಾಗಿ ಬಂದು ತಮ್ಮ ಜಮೀನನ್ನು ಮಾರುಕಟ್ಟೆ ದರದಂತೆ ಖರೀದಿ ಮಾಡಬೇಕೆಂದು ಮನವಿ ಮಾಡಿದ್ದಾರೆ. ಕೆಲವು ಕಡೆ ಜಮೀನೇ ಇಲ್ಲದ ರೈತರು ಪ್ರತಿಭಟನೆ ನಡೆಸುತ್ತಾರೆ. ಇದರ ಹಿಂದೆ ರಾಜಕೀಯ ಉದ್ದೇಶವೂ ಇದೆ. ರಾಜ್ಯದಲ್ಲಿ ಇದುವರೆಗೂ ನಾವು ಕೈಗಾರಿಕೆಗಳಿಗೆ ಕೇವಲ 0.61 ಶೇ. ಭೂಮಿಯನ್ನು ಮಾತ್ರ ಬಳಸಿಕೊಂಡಿದ್ದೇವೆ ಎಂದು ವಿವರಿಸಿದರು.

ಜಾಗತಿಕ ಬಂಡವಾಳ ಹೂಡಿಕೆಗಾರರ ಸಮಾವೇಶದಲ್ಲಿ ಶೇ. 90ರಷ್ಟು ಟಯರ್-2 ಮತ್ತು 3 ನಗರಗಳಲ್ಲಿ ಹೂಡಿಕೆಯಾಗಿವೆ. 2 ಮತ್ತು 3ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಗಮನಹರಿಸಿದ್ದೇವೆ ಎಂದರು. ಕೈಗಾರಿಕಾ ಉದ್ದೇಶಗಳಿಗೆ ಯಾರು ಜಮೀನು ಪಡೆದಿರುತ್ತಾರೋ ಅಂತಹವರು ಎರಡು ವರ್ಷದೊಳಗೆ ಉದ್ಯಮವನ್ನು ಆರಂಭಿಸಬೇಕು.

ಒಂದು ವೇಳೆ ಯೋಜನೆ ಪ್ರಾರಂಭಿಸದಿದ್ದರೆ, ಜಮೀನನ್ನು ಹಿಂಪಡೆಯುತ್ತೇವೆ. ರಿಯಲ್ಎಸ್ಟೇಟ್ ಅಥವಾ ಅನ್ಯ ಯೋಜನೆಗಳಿಗೆ ಬಳಸಿಕೊಳ್ಳಲು ಅವಕಾಶವಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.

ಉದ್ಯೋಗ ಸೃಷ್ಟಿ:
ಮಂಗಳವಾರ ಕರ್ನಾಟಕ ಉದ್ಯೋಗ ಮಿತ್ರದಲ್ಲಿ ನಡೆದ 136ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ 59 ಯೋಜನೆಗಳಿಂದ 20,627.88 ಕೋಟಿ ಬಂಡವಾಳ ಹೂಡಿಕೆಯಾಗಿದ್ದು, ಇದರಿಂದ 80,764 ಜನರಿಗೆ ಉದ್ಯೋಗಾವಕಾಶ ಲಭಿಸಲಿವೆ ಎಂದು ನಿರಾಣಿ ತಿಳಿಸಿದರು.

50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮದ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, 852.06 ಕೋಟಿ ಬಂಡವಾಳ ಹೂಡಿಕೆಯಾಗಿ 3560 ಜನರಿಗೆ ಉದ್ಯೋಗ ಅವಕಾಶ ಲಭಿಸಲಿದೆ. 15 ಕೋಟಿಯಿಂದ 50 ಕೋಟಿಯೊಳಗಿನ 48 ಹೊಸ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದ್ದು, ಒಟ್ಟು 923.9 ಕೋಟಿ ಬಂಡವಾಳ ಹೂಡಿಕೆಯಾಗಿ 4444 ಜನರಿಗೆ ಉದ್ಯೋಗಗಳು ಸಿಗಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆಯ ನಾಲ್ಕು ಯೋಜನೆಗಳಿಂದ 852.73 ಕೋಟಿ ಬಂಡವಾಳ ಹೂಡಿಕೆಯಾಗಿ ಅಂದಾಜು 1460 ಜನರಿಗೆ ಉದ್ಯೋಗ ಅವಕಾಶ ಸಿಗಲಿದೆ ಎಂದು ನಿರಾಣಿ ಅವರು ತಿಳಿಸಿದರು.

Articles You Might Like

Share This Article