ನವದೆಹಲಿ, ಅ.11- ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‍ಗಳ ಅಭೂತಪೂರ್ವ ಗೆಲುವು ಸಾಧಿಸಿ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಟೀಮ್ ಇಂಡಿಯಾ ಇಂದು ಆಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲೂ ಟಾಸ್ ಸೋತು ಫೀಲ್ಡಿಂಗ್ ಮಾಡುತ್ತಿದೆ.
ಅಕ್ಟೋಬರ್ 8 ರಂದು ಚೆನ್ನೈನ ಚಪಾಕ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿ 10 ಓವರ್ ಗಳಲ್ಲಿ 34 ರನ್ ನೀಡಿ ಕ್ಯಾಮರೂನ್ ಗ್ರೀನ್ ಅವರ ವಿಕೆಟ್ ಪಡೆದಿದ್ದ ರವಿಚಂದ್ರನ್ ಅಶ್ವಿನ್ ಅವರಿಗೆ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಿಂದ ಹೊರಗಿಟ್ಟಿದ್ದಾರೆ.
ನವದೆಹಲಿಯ ಅರುಣ್‍ಜೇಟ್ಲಿ ಕ್ರೀಡಾಂಗಣವು ವೇಗಿಗಳಿಗೆ ಹೆಚ್ಚು ಸಹಕರಿಸುವುದರಿಂದ ರವಿಚಂದ್ರನ್ ಅಶ್ವಿನ್ ಅವರು ಪ್ಲೇಯಿಂಗ್ 11ನಿಂದ ಹೊರಗಿಟ್ಟು ವೇಗದ ಆಲ್ ರೌಂಡರ್ ಶಾರ್ದೂಲ್ ಠಾಕೂರ್‌ಗೆ ಸ್ಥಾನ ಕಲ್ಪಿಸುವ ಮೂಲಕ ಆಫ್ಘಾನಿಸ್ತಾನದ ಬ್ಯಾಟರ್‍ಗಳ ಮೇಲೆ ಒತ್ತಡ ಹೇರುವ ರಣತಂತ್ರವನ್ನು ಟೀಮ್ ಇಂಡಿಯಾದ ನಾಯಕ ರೋಹಿತ್ ಸರ್ಮಾ ಹೆಣೆದಿದ್ದಾರೆ.ಆದರೆ ಆಫ್ಘಾನಿಸ್ತಾನ ತಂಡವು ಪಾಕಿಸ್ತಾನ ವಿರುದ್ಧ ಆಡಿದ್ದ ತಂಡವನ್ನೇ ಟೀಮ್ ಇಂಡಿಯಾ ವಿರುದ್ಧದ ಪಂದ್ಯಕ್ಕೂ ಮುಂದುವರೆಸಿದ್ದಾರೆ.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ
ಇಶಾನ್ ಕಿಶನ್‍ಗೆ ಕೊನೆ ಛಾನ್ಸ್?
ಯುವ ಆಟಗಾರ ಶುಭಮನ್ ಗಿಲ್ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ದ್ವಿಶತಕ ವೀರ, ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್‍ಗೆ ಅವಕಾಶ ಕಲ್ಪಿಸಲಾಗಿತ್ತು. ನಾಯಕ ರೋಹಿತ್ ಶರ್ಮಾರೊಂದಿಗೆ ಇನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್, ದೊಡ್ಡ ಮೊತ್ತಕ್ಕೆ ಕೈ ಹಾಕುವ ಮೂಲಕ ಅನುಭವಿ ವೇಗಿ ಮಿಚೆಲ್ ಸ್ಟಾರ್ಕ್‍ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು.
ಡಕೌಟ್ ಆಗಿರುವ ಇಶಾನ್ ಕಿಶನ್‍ಗೆ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಅವಕಾಶ ನೀಡಲಾಗಿದ್ದು , ಈ ಪಂದ್ಯದಲ್ಲಿ ಅವರು ತಮ್ಮ ಬ್ಯಾಟ್‍ನಿಂದ ಸಾಕಷ್ಟು ರನ್ ಕಾಣಿಕೆ ನೀಡಬೇಕು. ಇಲ್ಲದಿಂದ ಮುಂದಿನ ಪಂದ್ಯಗಳಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ.