ಹಾಸನ, ಫೆ.3- ಈ ಬಾರಿಯ ಬಜೆಟ್ನಲ್ಲಿ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಬೇಲೂರು, ಹಳೇಬೀಡು, ಸೋಮನಾಥಪುರ ದೇವಾಲಯ ನಾಮ ನಿರ್ದೇಶನ ಮಾಡಿರುವುದು ಸಂತಸ ತಂದಿದೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಲಿಂಗೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಬೇಲೂರು-ಹಳೇಬೀಡು ಸೇರಿರುವುದು ಜಿಲ್ಲಾಯ ಮಟ್ಟಿಗೆ ಅಲ್ಲದೆ ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಹಕಾರ ನೀಡಿದೆ ಅಲ್ಲದೆ ಕಲೆ ಮತ್ತು ಸಂಸ್ಕøತಿ ಉಳಿಸಿ ಬೆಳೆಸಲು ಉತ್ತೇಜನ ನೀಡಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಪಾರಂಪರಿಕ ಪಟ್ಟಿಯಲ್ಲಿ ಸೇರಿರುವುದರಿಂದ ದೇವಾಲಯದ ಸುತ್ತ ಇಂತಿಷ್ಟು ದೂರದಲ್ಲಿ ನಿರ್ದಿಷ್ಟ ಎತ್ತರದಲ್ಲಿ ಹೊಸ ಕಟ್ಟಡಗಳು ತಲೆ ಎತ್ತಬಾರದು ಎಂಬ ನಿಯಮಗಳು ಹಿಂದಿನಿಂದಲೂ ಸಹ ಜಾರಿಯಲ್ಲಿದೆ. ಮುಂದಿನ ದಿನದಲ್ಲಿಯೂ ಸಹ ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆಯನ್ನು ಪಾಲನೆ ಮಾಡಲಾಗುವುದು ಎಂದು ತಿಳಿಸಿದರು.
ನಮ್ಮ ಪ್ರವಾಸಿ ತಾಣವನ್ನು ಪಾರಂಪರಿಕ ಪಟ್ಟಿಗೆ ಸೇರಿಸಿದೆ ಪ್ರಧಾನ ಮಂತ್ರಿ ಹಾಗೂ ಹಣಕಾಸು ಸಚಿವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ ಅವರು ಇದರಿಂದ ಬೇಲೂರು- ಹಳೇಬೀಡಿನಲ್ಲಿ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದಲೂ ಹೆಚ್ಚಿನ ಅನುದಾನ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
