ಬೆಂಗಳೂರು, ಜ.10- ವಿಶ್ವ ಹಿಂದಿ ದಿವಸವನ್ನು ನಿಲ್ಲಿಸಿ ಎಂದು ಆಗ್ರಹಿಸಿರುವ ಜೆಡಿಎಸ್, ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವುದನ್ನು ಖಂಡಿಸುವುದಾಗಿ ಹೇಳಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಒಕ್ಕೂಟ ಸರ್ಕಾರದ ಅಣತಿಯಂತೆ ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ ಎಂದಿದೆ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ಬೆನ್ನು ಮೂಳೆ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ ಎಂದು ತಿಳಿಸಿದೆ.
ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ @BJP4Karnataka ದವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ.
1/5— Janata Dal Secular (@JanataDal_S) January 10, 2023
ಬಹು ಭಾಷೆಯ, ಬಹು ಸಂಸ್ಕ್ರತಿಯ ದೇಶ ನಮ್ಮ ಭಾರತ. ಕೇವಲ ಒಂದು ಭಾಷೆಯನ್ನು ಮೆರೆಸುವ ಈ ಕೀಳು ಮಟ್ಟದ ರಾಜಕೀಯ ಏಕೆ? ಒಂದು ಭಾಷೆಯ ವೈಭವೀಕರಣದಿಂದಾಗಿ ಭಾರತದ ಅನ್ಯ ಭಾಷೆಗಳ ಶ್ರೀಮಂತಿಕೆಯನ್ನು ಗೌಣವಾಗಿಸುವ ಈ ಹುನ್ನಾರಕ್ಕೆ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಹೇಳಿದೆ.
ಬಾಂಗ್ಲಾ ವಿಮಾನದಲ್ಲಿ ಬಟ್ಟೆ ಬಿಚ್ಚಿ ಬಡಿದಾಡಿಕೊಂಡ ಪ್ರಯಾಣಿಕರು
ನಮ್ಮ ದೇಶದ ಸಂವಿಧಾನದಲ್ಲಿ ರಾಷ್ಟ್ರಭಾಷೆ ಎಂಬ ಪರಿಕಲ್ಪನೆಯೇ ಇಲ್ಲ. ಹಾಗಿದ್ದಾಗ, ಯಾವಾಗಿಂದ ಹಿಂದಿ ರಾಷ್ಟ್ರ ಭಾಷೆಯಾಯ್ತು? ಅಂತರರಾಷ್ಟ್ರೀಯ ಮಟ್ಟದಲ್ಲಿ ಹಿಂದಿಯನ್ನು ಈ ಪರಿ ವಿಜೃಂಭಿಸುವ ನಿಮ್ಮ ರಾಜಕೀಯವನ್ನು ಸ್ವಾಭಿಮಾನಿ ಕನ್ನಡಿಗರು ಒಪ್ಪುವುದಿಲ್ಲ. ಇದಕ್ಕೆ ತಕ್ಕ ಪ್ರತಿಫಲ ಉಣ್ಣುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಹಿಂದಿ ಭಾಷಿಕ ಪ್ರದೇಶಗಳು ಕನ್ನಡವೂ ಸೇರಿದಂತೆ ಭಾರತದ ಭಿನ್ನ ಭಾಷೆಗಳ ದಿವಸವನ್ನು ಆಚರಿಸುತ್ತವೆಯೇ? ಕೇವಲ ಒಂದು ಭಾಷೆಗೆ ಈ ಮಟ್ಟದ ಆದ್ಯತೆ ಏಕೆ? ಕೇಂದ್ರ ಬಿಜೆಪಿಯ ತಾಳಕ್ಕೆ ಕುಣಿಯುವುದು ಬಿಟ್ಟು ಬೇರೇನೂ ಬಾರದ ರಾಜ್ಯ ಬಿಜೆಪಿಯವರೆ, ನಿಮ್ಮ ಅಭಿಮಾನ ಶೂನ್ಯ ನಡೆಯು ತಲೆತಗ್ಗಿಸುವಂತದ್ದು ಎಂದು ಟೀಕಿಸಿದೆ.
ಅಮೆರಿಕದಲ್ಲಿ ಜೂ.ಎನ್ಟಿಆರ್ಗೆ ಅದ್ಭುತ ಸ್ವಾಗತ
ನನ್ನ ಕನ್ನಡಕ್ಕಿಂತ ಯಾರೂ ದೊಡ್ಡವರಲ್ಲ ಎಂದ ಕುವೆಂಪು ಅವರ ಕನ್ನಡಾಭಿಮಾನ ನಮ್ಮದೂ ಕೂಡ. ಭಾರತದ ಅಸಂಖ್ಯ ಶ್ರೀಮಂತ ಭಾಷೆಗಳಲ್ಲಿ ಹಿಂದಿಯೂ ಒಂದು. ಅದರ ಹೊರತಾಗಿ, ಹಿಂದಿ ಹೇರಿಕೆ, ವೈಭವೀಕರಣದ ಯಾವುದೇ ಕುತಂತ್ರದ ರಾಜಕೀಯಕ್ಕೆ ಕ್ಕಾರವೇ ಸೈ ಎಂದು ತಿಳಿಸಿದೆ.
WorldHindiDay, JDS, Hindi, imposition,