Monday, January 13, 2025
Homeರಾಷ್ಟ್ರೀಯ | Nationalಮಹಾ ಕುಂಭ 2025 (Live Updates) : ಅದ್ಭುತ ದೃಶ್ಯಗಳು

ಮಹಾ ಕುಂಭ 2025 (Live Updates) : ಅದ್ಭುತ ದೃಶ್ಯಗಳು

World's largest religious fair Maha Kumbh Live Updates

*ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಕ್ಕೆ ಪ್ರಯಾಗ್‌ರಾಜ್‌ನಲ್ಲಿ ಚಾಲನೆ
ಪ್ರಯಾಗ್‌ರಾಜ್‌,ಜ.13- ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳವು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿದ್ದು, ಲಕ್ಷಾಂತರ ನಾಗ ಸಾಧುಗಳು ಶಾಹಿ ಸ್ನಾನ ಮಾಡುವ ಮೂಲಕ ಮಹಾಕುಂಭ ಮೇಳಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ.

ಫೆ. 26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯಲಿದ್ದು, ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ.ಇಲ್ಲಿಯವರೆಗೆ, 40 ಲಕ್ಷಕ್ಕೂ ಹೆಚ್ಚು ಜನರು ನದಿಯಲ್ಲಿ ಸ್ನಾನ ಮಾಡಿದ್ದಾರೆ ಎಂದು ಮಹಾ ಕುಂಭಮೇಳದ ಅಧಿಕಾರಿ ವಿಜಯ್‌ ಕಿರಣ್‌ ಆನಂದ್‌ ಅವರು ತಿಳಿಸಿದ್ದಾರೆ.

ಸಂಗಮದಲ್ಲಿ ಸ್ನಾನ ಮಾಡಲು 33 ಲಕ್ಷ ಭಕ್ತರು ಭೇಟಿ ನೀಡಿದ್ದರು. ಕಳೆದ ಎರಡು ದಿನಗಳಲ್ಲಿ 85 ಲಕ್ಷಕ್ಕೂ ಹೆಚ್ಚು ಜನರು ನದಿಯಲ್ಲಿ ಸ್ನಾನ ಮಾಡಿದ್ದಾರೆಂದು ಮಾಹಿತಿ ನೀಡಿದ್ದಾರೆ.ಈ ಧಾರ್ಮಿಕ ಮೇಳದಲ್ಲಿ ಕೋಟಿಗಟ್ಟಲೇ ಸಾಧು-ಸಂತರು ನಾಗಸಾಧುಗಳು, ಅಘೋರಿಗಳು, ಭಕ್ತರು ಆಗಮಿಸುವುದು ಇಲ್ಲಿನ ವಿಶೇಷ.ಹಿಂದೂ ಧರ್ಮದ ಬಹುದೊಡ್ಡ ಆಚರಣೆ ಎಂದು ಇದನ್ನು ಕರೆಯಲಾಗಿದೆ. ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಆಗಮಿಸುವವರ ಸಂಖ್ಯೆ ಕೋಟಿಗೆ ತಲುಪಿದ್ದು ಇದು ಆರ್ಥಿಕತೆಗೂ ಕೊಡುಗೆ ನೀಡುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

ಇನ್ನು ಸನಾತನ ಧರ್ಮದ ಪ್ರಕಾರ ಈ ಕುಂಭ ಸ್ನಾನವನ್ನು ಬಹಳ ಪವಿತ್ರ ಎಂದು ಪರಿಗಣಿಸಲಾಗಿದೆ.12 ವರ್ಷಗಳ ಅವಧಿಯಲ್ಲಿ ನಾಲ್ಕು ಬಾರಿ ಆಚರಿಸಲಾಗುತ್ತದೆ. ಕುಂಭಮೇಳ ಆಚರಣೆಯು ಭಾರತದ 4 ಪವಿತ್ರ ಸ್ಥಳಗಳಿಗೆ ಸಂಬಂಧಿಸಿದೆ.

ಹಾಗೆ ಪ್ರತಿಯೊಂದು ನಗರದ ಹಿನ್ನೆಲೆಯಲ್ಲಿ ನದಿಗಳ ಸ್ಥಾನ ಪ್ರಮುಖವಾಗಿದೆ. ಕುಂಭ ಮತ್ತು ಮಹಾಕುಂಭವು ಮೋಕ್ಷವನ್ನು ಸಾಧಿಸುವ ಕೇಂದ್ರಿತ ಹಬ್ಬಗಳಾಗಿವೆ. ಈ ಹಬ್ಬಗಳು ಸಮುದ್ರ ಮಂಥನದ ಸಮಯದಲ್ಲಿ ಭೂಮಿಯ ಮೇಲೆ ಬಿದ್ದ ಅಮೃತದ ಹನಿಗಳನ್ನು ಸ್ಪರ್ಶಿಸಲಿದೆ ಎಂದು ನಂಬಲಾಗಿದೆ. ಈ ಸಮುದಲ್ಲಿಯೇ ನದಿಯ ನೀರು ಅಮೃತವಾಗಿ ಬದಲಾಗುತ್ತದೆ. ಹೀಗಾಗಿ ನದಿಯಲ್ಲಿ ಸ್ನಾನ ಮಾಡುವುದು ಪವಿತ್ರ ಎಂದು ನಂಬಲಾಗಿದೆ. ಅದರಲ್ಲೂ ತ್ರಿವೇಣಿ ಸಂಗಮದ ಸ್ಥಳ ಪ್ರಮುಖ ಸ್ಥಾನ ಪಡೆದುಕೊಂಡಿದೆ.ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದೆ. ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆಯಾಗಿದೆ. ಯಾವುದೇ ಅವಘಡಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ.

ನದಿಯ ಉದ್ದಕ್ಕೂ 12 ಕಿಲೋ ಮೀಟರ್‌ ಘಾಟ್‌ಗಳನ್ನು ನಿರ್ಮಾಣ ಮಾಡಲಾಗಿದೆ.ಪ್ರತಿ 12 ವರ್ಷಗಳಿಗೊಮೆ ನಡೆಯುವ ಕುಂಭಮೇಳ ಈ ಬಾರಿ ಅತೀ ವಿಶೇಷವಾಗಿದೆ. ಏಕೆಂದರೆ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದರೆ, ಸಮೀಪದಲ್ಲೇ ಇರುವ ಅಯೋಧ್ಯೆಯಲ್ಲಿ ಮೊದಲ ವಾರ್ಷಿಕೋತ್ಸವ ಸಂಭ್ರಮ ನಡೆಯುತ್ತಿದೆ.ಈ ಮಹಾ ಕುಂಭಮೇಳಕ್ಕೆ ಭಾರತೀಯರಷ್ಟೇ ಅಲ್ಲದೇ ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

ಗಂಗಾ, ಯಮುನಾ, ಸರಸ್ವತಿ ನದಿಗಳ ಪವಿತ್ರ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಾರೆ. ಇಲ್ಲಿ ಸ್ನಾನ ಮಾಡಿದರೆ ಪಾಪನಾಶ, ಮೋಕ್ಷ ಸಿಗುತ್ತದೆ ಎಂಬುದು ಭಕ್ತರ ನಂಬಿಕೆ.ಈ ಹಿಂದೆ 2013ರಲ್ಲಿ ಮಹಾ ಕುಂಭಮೇಳ ನಡೆದಿತ್ತು. ಇದೀಗ 2025ರ ಜ.13ರಿಂದ ಆರಂಭವಾಗಿದೆ. ಫೆ.26ರ ಶಿವರಾತ್ರಿ ದಿನದಂದು ಈ ಕುಂಭಮೇಳ ಸಂಪನ್ನಗೊಳ್ಳಲಿದೆ. ಜ.14ರಂದು ಮಕರ ಸಂಕ್ರಾಂತಿ, ವಸಂತ, ಪಂಚಮಿ, ಹೀಗೆ 5 ಬಾರಿ ಪುಣ್ಯಸ್ನಾನ ಪ್ರಯಾಗ್‌ರಾಜ್‌ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ನಡೆಯಲಿದೆ.

ಈ ಬಾರಿಯ ಮಹಾಕುಂಭಮೇಳದಲ್ಲಿ ಒಂದೇ ಒಂದು ಪ್ಲಾಸ್ಟಿಕ್‌ ವಸ್ತು ಬಳಸದೇ ಸಂಪೂರ್ಣ ಪರಿಸರ ಸ್ನೇಹಿಯಾಗಿ ಆಚರಿಸಲು ಉದ್ದೇಶಿಸಲಾಗಿದೆ. ಸ್ವಚ್ಛತೆ ಮತ್ತು ಶುದ್ಧತೆ ಕಾಪಾಡುವುದಕ್ಕಾಗಿ ಬರೋಬ್ಬರಿ 1,500 ಪೌರ ಕಾರ್ಮಿಕರು ಹಗಲಿರುಳು ದುಡಿಯುತ್ತಿದ್ದಾರೆ. ನದಿಯ ಒಂದು ದಡದಿಂದ ಮತ್ತೊಂದು ದಡಕ್ಕೆ ಸರಾಗವಾಗಿ ಸಾಗಲು 50ಕ್ಕೂ ಹೆಚ್ಚು ತಾತ್ಕಾಲಿಕ ಬ್ರಿಡ್‌್ಜಗಳನ್ನು ನಿರ್ಮಿಸಲಾಗಿದೆ. ಅಲ್ಲದೇ 1.5 ಲಕ್ಷ ಶೌಚಾಲಯ, ಸ್ನಾನಗೃಹಗಳನ್ನು ನಿರ್ಮಿಸಲಾಗಿದೆ. ಏಕಕಾಲಕ್ಕೆ ಸಾವಿರಾರು ಜನರು ತಂಗಲು ಅನುಕೂಲವಾಗುವಂತೆ ಅಲ್ಲಲ್ಲಿ ಟೆಂಟ್ಗಳನ್ನ ನಿರ್ಮಿಸಿರುವುದು ವಿಶೇಷ.


.

ಮಹಾ ಕುಂಭಮೇಳದಲ್ಲಿ ಕಂಡುಬಂದ ಅದ್ಭುತ ದೃಶ್ಯಗಳು

ಈ ಕುಂಭಮೇಳ ಏಕೆ ವಿಶೇಷ? :
ಈ ವರ್ಷ ನಡೆಯುತ್ತಿರುವ ಮಹಾ ಕುಂಭ ಮೇಳ ವಿಶೇಷತೆಯಿಂದ ಕೂಡಿದೆ. ಇದು 144 ವರ್ಷಗಳಿಗೊಮೆ ನಡೆಯಲಿರುವ ಕುಂಭವಾಗಿದೆ. ಗ್ರಹಗಳು ಮತ್ತು ನಕ್ಷತ್ರಗಳ ಅಪರೂಪದ ಜೋಡಣೆಯಿಂದಾಗಿ 144 ವರ್ಷಗಳ ನಂತರ ಮಹಾ ಕುಂಭಮೇಳ 2025ರಲ್ಲಿ ನಡೆಯುತ್ತಿದೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕೆ ಈ ದಿನ ಸೂಕ್ತವಾಗಿದೆ ಎಂದು ನಂಬಲಾಗಿದೆ.

RELATED ARTICLES

Latest News