ಸತೀಶ್‌ ಜಾರಕಿಹೊಳಿ ಸಿಎಂ ಆದರೆ ಸ್ವಾಗತಿಸುತ್ತೇನೆ : ಶಾಸಕ ಲಕ್ಷ್ಮಣ ಸವದಿ

ಬೆಳಗಾವಿ,ಸೆ.8- ಕಾಂಗ್ರೆಸ್‌‍ನಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ತಾವು ಸ್ವಾಗತಿಸುವುದಾಗಿ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಯಾರೇ ಮುಖ್ಯಮಂತ್ರಿಯಾದರೂ ಅದನ್ನು ನಾನು ಸ್ವಾಗತಿಸುತ್ತೇನೆ. ಸತೀಶ್‌ ಜಾರಕಿಹೊಳಿ ಸೇರಿದಂತೆ ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ. ಬಿಜೆಪಿಯಲ್ಲಿ ಪ್ರಭಾವಿ ನಾಯಕರಾಗಿದ್ದ ಲಕ್ಷ್ಮಣ್‌ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ ವಲಸೆ ಬಂದರು. ಗೆದ್ದ ಒಂದೇ ದಿನದಲ್ಲಿ ಕಾಂಗ್ರೆಸಿಗರು ಅವರಿಗೆ ಟಿಕೆಟ್‌ ಘೋಷಣೆ ಮಾಡಿದ್ದರು. ಅವರು ಗೆಲುವು ಕೂಡ ಕಂಡರು. … Continue reading ಸತೀಶ್‌ ಜಾರಕಿಹೊಳಿ ಸಿಎಂ ಆದರೆ ಸ್ವಾಗತಿಸುತ್ತೇನೆ : ಶಾಸಕ ಲಕ್ಷ್ಮಣ ಸವದಿ