ಬೆಂಗಳೂರು, ಸೆ. 21- ಮೈಸೂರು ದಸರಾ ಪ್ರಯುಕ್ತ ನಾಳೆಯಿಂದ ದಸರಾ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ದೊರೆಯಲಿದ್ದು ವಿಶ್ವವಿಖ್ಯಾತ, ಒಲಿಂಪಿಯನ್ ಕುಸ್ತಿಪಟು ವಿನೇಶ್ ಪೋಗಟ್ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಾಳೆ ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಒಲಿಂಪಿಕ್‌್ಸ ಕ್ರೀಡಾಕೂಟಗಳಲ್ಲಿ ಮೂರು ಬಾರಿ ಭಾರತ ತಂಡವನ್ನು ಪ್ರತಿನಿಧಿಸಿರುವ ವಿನೇಶ್ ಪೋಗಾಟ್ ಪ್ರಶಸ್ತಿ ಗೆದ್ದು ದೇಶದ ಕೀರ್ತಿ ಹೆಚ್ಚಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 50 ಕೆಜಿ ವಿಭಾಗದ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಭರವಸೆಯನ್ನು ವಿನೇಶ್ ಪೋಗಾಟ್ ಮೂಡಿಸಿದ್ದರಾದರೂ, ತೂಕ ಹೆಚ್ಚಳದಿಂದ ಟೂರ್ನಿಯಿಂದ ಹೊರಬಿದ್ದ ನಂತರ ತಮ್ಮ ಕುಸ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದರು.
2024ರಲ್ಲಿ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ವಿನೇಶ್ ಪೋಗಾಟ್ ಆಯ್ಕೆಯಾಗಿದ್ದಾರೆ.