Saturday, September 14, 2024
Homeರಾಜ್ಯ402 ಪೊಲೀಸ್‌‍ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ

402 ಪೊಲೀಸ್‌‍ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ

Written test for 402 Police Sub Inspector Posts on 22nd Sep

ಬೆಂಗಳೂರು,ಸೆ.3- ಒಟ್ಟು 402 ಪೊಲೀಸ್‌‍ ಸಬ್‌ ಇನ್ಸ್‌ಪೆಕ್ಟರ್​ ಹುದ್ದೆಗಳಿಗೆ ಇದೇ ತಿಂಗಳ 22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ.

ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ನಿನ್ನೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಲ್ಲದೆ ಗ್ರಾಮ ಆಡಳಿತಾಧಿಕಾರಿ ಹ್ದುೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್‌ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

RELATED ARTICLES

Latest News