Thursday, December 12, 2024
Homeರಾಜ್ಯಬಿಜೆಪಿ ಟಿಕೆಟ್ ಸಿಕ್ಕ ನಂತರ ಮಹಾರಾಜ ಯದುವೀರ್ ಮೊದಲ ಪ್ರತಿಕ್ರಿಯೆ

ಬಿಜೆಪಿ ಟಿಕೆಟ್ ಸಿಕ್ಕ ನಂತರ ಮಹಾರಾಜ ಯದುವೀರ್ ಮೊದಲ ಪ್ರತಿಕ್ರಿಯೆ

ಮೈಸೂರು, ಮಾ. 14- ಮೈಸೂರು ಮತ್ತು ಕೊಡಗಿನ ಸರ್ವಾಂಗಿಣ ಅಭಿವೃದ್ಧಿಗಾಗಿ ಕೆಲಸ ಮಾಡಲು ತಮಗೆ ಅವಕಾಶ ನೀಡಬೇಕು ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಮನವಿ ಮಾಡಿದ್ದಾರೆ.

ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಹೆಸರು ಅಧಿಕೃತವಾಗಿ ಪ್ರಕಟಣೆಯಾಗುತ್ತಿದ್ದಂತೆ ಈ ಬಗ್ಗೆ ಫೇಸ್ಬುಕಲ್ಲಿ ಪೊಸ್ಟ್ ಮಾಡಿ, ತಮಗೆ ಬಿಜೆಪಿ ಟಿಕೆಟ್ ದೊರೆತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿ ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗೆ ಇದೆ ಎಂದು ಹೇಳಿದ್ದಾರೆ.

ಈ ಮೂಲಕ ನನಗೆ ಪ್ರಜಾ ಬಾಂಧವರನ್ನು ಭೇಟಿಯಾಗುವ ಅವಕಾಶ ಸಿಕ್ಕಿದೆ. ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯ ನೀಡಿದ್ದೀರಿ ಈಗ ಈ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ಮೇಲೆ ನಂಬಿಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಎಲ್ ಸಂತೋಷ್ ಹಾಗೂ ಪಕ್ಷದ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದ ಎಂದು ತಿಳಿಸಿ ಕಳೆದೆರಡು ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಅಭಿನಂದಿಸಿದ್ದಾರೆ.

RELATED ARTICLES

Latest News