ಬೆಂಗಳೂರು,ಆ.6- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೂರವಾಣಿ ಮೂಲಕ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದರಿಂದ ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಬೆಳಿಗ್ಗೆ ದೂರವಾಣಿ ಮೂಲಕ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರಾದ ಡಾ.ಅಶ್ವತ್ ನಾರಾಯಣ್, ಹಾಲಪ್ಪ ಆಚಾರ್, ಪ್ರಭು ಚೌಹಾಣ, ಬಿ.ಸಿ.ನಾಗೇಶ್ ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು.