ಚಾಮರಾಜನಗರ,ಫೆ.16- ಕಾವೇರಿ ನದಿಯಲ್ಲಿ ಸ್ನಾನ ಮಾಡುವಾಗ ಯೋಗಪಟುವೊಬ್ಬರು ಪ್ರಾಣಬಿಟ್ಟಿರುವ ಘಟನೆ ಕೊಳ್ಳೇಗಾಲದ ದಾಸನಪುರ ಬಳಿ ನಡೆದಿದೆ. ಕೊಳ್ಳೇಗಾಲ ಪಟ್ಟಣದ ಲಕ್ಷ್ಮಿನಾರಾಯಣ ದೇವಸ್ಥಾನ ಬಡಾವಣೆಯ ನಾಗರಾಜು (78) ಮೃತ ವ್ಯಕ್ತಿ.
ನಾಗರಾಜು ತೀರ್ಥ ಸ್ನಾನ ಮಾಡಲೆಂದು ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ತೇಲುವ ಸ್ಥಿತಿಯಲ್ಲೇ ಇದ್ದರು. ಜೊತೆಗೆ ಬಂದಿದ್ದವರು ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ.
ಸುಮಾರು 30 ವರ್ಷದಿಂದು ಯೋಗ ಮಾಡುತ್ತಿದ್ದರು ಹಲವರಿಗೆ ಕಲ್ಲಿಸುತ್ತಿದ್ದರು ಇಂದು ಯೋಗಾ ಮಾಡುತ್ತಲೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಸದಸ್ಯರು ಕಣ್ಣೀರು ಹಾಕಿದ್ದಾರೆ.
ಪೊಲೀಸರು ಸ್ಥಳಕ್ಕೆ ದಾವಿಸಿ ಶವವನ್ನು ನದಿಯಿಂದ ಹೊರಗೆ ತಂದು ಆಸ್ಪತ್ರೆಗೆ ಸಾಗಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.