Thursday, May 2, 2024
Homeಜಿಲ್ಲಾ ಸುದ್ದಿಗಳುಸಿಬಿಐ ದಾಳಿ ವೇಳೆ ಇನ್‌ಸ್ಪೆಕ್ಟರ್‌ ಪರಾರಿ

ಸಿಬಿಐ ದಾಳಿ ವೇಳೆ ಇನ್‌ಸ್ಪೆಕ್ಟರ್‌ ಪರಾರಿ

ಧಾರವಾಡ,ಅ.8- ನಗರದಲ್ಲಿ ನಡೆದ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಹಿಂದಿನ ತನಿಖಾಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್‌ ಚೆನ್ನಕೇಶವ ಟಿಂಗರಿಕರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಮನೆಯಿಂದ ಚೆನ್ನಕೇಶವ ಪರಾರಿಯಾದ ಘಟನೆ ನಡೆದಿದೆ.

ಧಾರವಾಡದ ಮಲಪ್ರಭಾ ನಗರದಲ್ಲಿರುವ ಚೆನ್ನಕೇಶವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಚೆನ್ನಕೇಶವ ಅವರು ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2016ರ ಜೂನ್ 15ರಂದು ಯೋಗೇಶ್ ಗೌಡ ಕೊಲೆ ನಡೆದಾಗ ಧಾರವಾಡ ಉಪನಗರ ಠಾಣೆ ಇನ್‌ಸ್ಪೆಕ್ಟರ್‌ ಆಗಿದ್ದ ಟಿಂಗರಿಕರ್ ವಿರುದ್ಧ ಸಾಕ್ಷಿ ನಾಶ ಹಾಗೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.ಬಳಿಕ ಧಾರವಾಡ ಹೈಕೋರ್ಟ್‍ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಟಿಂಗರಿಕರ್, ಎಫ್ಐಆರ್‌ಗೆ ತಡೆ ತರಲು ಯತ್ನಿಸಿದ್ದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-10-2023)

ತನ್ನ ವಿರುದ್ಧ ದಾಖಲಾದ ಎಫ್ಐಆರ್‌ಗೆ ತಡೆ ನೀಡುವಂತೆ ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಕೋರ್ಟ್, ಕಳೆದ ವಾರ ಅರ್ಜಿ ವಜಾಗೊಳಿಸಿತ್ತು. ಅಲ್ಲದೆ , ಜನಪ್ರತಿನಿಧಿಗಳ ಕೋರ್ಟ್‍ನಲ್ಲಿ ನಡೆದ ವಿಚಾರಣೆ ವೇಳೆ ಟಿಂಗರಿಕರ್ ಅವರು ಗೈರಾಗಿದ್ದರು. ಹೀಗಾಗಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

ಕೋರ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಚೆನ್ನಕೇಶವ ಟಿಂಗರಿಕರ್ ಅವರನ್ನು ಬಂಧಿಸಲು ಸಿಬಿಐ ಅಧಿಕಾರಿಗಳು ಟಿಂಗರಿಕರ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಟಿಂಕರಿಗರ್ ಮನೆಯಿಂದ ಪರಾರಿಯಾಗಿದ್ದಾರೆ.

RELATED ARTICLES

Latest News