ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಯೋಗೇಶ್ವರ್- ಶಿವಕುಮಾರ್

ಚನ್ನಪಟ್ಟಣ,ಆ.15– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಪೊಲೀಸರು, ಭದ್ರತಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಅನಂತರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಸನಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸೇರಿದಂತೆ ವಿವಿಧ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು. ಇತ್ತೀಚೆಗೆ ಪರಸ್ಪರ ರಾಜಕೀಯ ಪ್ರತಿಸ್ಪರ್ಧಿಗಳಾಗಿ ಗುರುತಿಸಿಕೊಂಡಿದ್ದ ಸಿ.ಪಿ.ಯೋಗೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಚನ್ನಪಟ್ಟಣ ವಿಧಾನಸಭಾ … Continue reading ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಯೋಗೇಶ್ವರ್- ಶಿವಕುಮಾರ್