ತ್ರಿವೇಣಿ ಸಂಗಮ ಕುಂಭ ಮೇಳಕ್ಕೆ ಯೋಗಿ ಆದಿತ್ಯನಾಥ್

Social Share
Yogi Adityanath

ಮಂಡ್ಯ,ಸೆ.28- ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿ ರುವ ಕುಂಭ ಮೇಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳದ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ನಾನಾ ಭಾಗಗಳಿಂದ ಸಾಧು, ಸಂತರು, ಭಾಗವಹಿಸಲಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯ ಸೇವೆ ನನ್ನ ಗುರಿ: ಮಹಾಕುಂಭ ಮೇಳವನ್ನು ಜಗದ್ಗುರಗಳ ಸೂಚನೆಯಂತೆ ಯಾವ ರೀತಿ ಮಾಡಬೇಕು ಎಂಬುದರ ಕುರಿತು ಇಂದು ಪೂರ್ವಭಾವಿ ಸಭೆ ನಡೆಸಲಾಯಿತು. ಮಹಾಕುಂಭಮೇಳ ನಡೆಯುತ್ತಿರುವುದು ನಮ್ಮೆಲ್ಲರ ಪುಣ್ಯ. 9 ವರ್ಷಗಳ ಹಿಂದೆ ಅದ್ಭುತವಾಗಿ ನಡೆದಿತ್ತು. ಇದೀಗ ಮತ್ತೆ ಜಗದ್ಗುರುಗಳ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸೋಣ ಎಂದು ರೇಷ್ಮೆ, ಯುವ ಸಬಲೀಕರಣ ಖಾತೆ ಸಚಿವ ಡಾ.ನಾರಾಯಣಗೌಡ ಇದೇ ವೇಳೆ ತಿಳಿಸಿದರು.

ಇದು ಕೆ.ಆರ್.ಪೇಟೆಗೆ ಮಾತ್ರವಲ್ಲ, ಸುತ್ತಮುತ್ತಲಿನ ನಾಲ್ಕೈದು ಜಿಲ್ಲೆಗಳಿಗೆ ಹೆಮ್ಮೆಯ ಕಾರ್ಯಕ್ರಮ. ನಾನು ಸೇವಕನಾಗಿ ದುಡಿಯೋಕೆ ಬಂದಿದ್ದು, ರಾಜಕಾರಣದಿಂದ ಏನನ್ನು ಮಾಡಬೇಕಿಲ್ಲ. ಸೇವಕನಾಗಿ ದುಡಿದು ಕುಂಭಮೇಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗೋಣ. ಈ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಬರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಮಹಾಕುಂಭಮೇಳದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಎಲ್ಲರ ಸುಯೋಗ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಗಂಗಾರತಿ, ಸ್ನಾನಘಟ್ಟಗಳನ್ನು ನಿರ್ಮಿಸಲಾಗು ತ್ತಿದ್ದು, ಸ್ನಾನ ಘಟ್ಟಗಳನ್ನು ಬಳಸುವಾಗ ಮುಂಜಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲರೂ ಇದಕ್ಕೆ ಸಹಕರಿಸಿ ಯಶಸ್ವಿಗೊಳಿಸಬೇಕು ಎಂದು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಯವರು ಹೇಳಿದರು.

ಕುಂಭಮೇಳ ಆಯೋಜನೆ ಕುರಿತು ಈ ಹಿಂದೆ ವಿಜಯನಗರದ ಮಠದಲ್ಲಿ ಪೂರ್ವಭಾವಿ ಸಭೆ ನಡೆದಿತ್ತು. ಇಂದು ಅದಕ್ಕೆ ಪೂರಕವಾಗಿ ಮತ್ತೊಂದು ಸಭೆ ನಡೆದಿದೆ. ಸರ್ಕಾರ, ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗ್ತಿದೆ. ನದಿ ನೀರಿಗೆ, ಗಾಳಿಗೆ ಯಾವುದೇ ಜಾತಿ ಇಲ್ಲ. ಜಾತಿಬೇಧ, ಪಕ್ಷಬೇಧ ಮರೆತು ಎಲ್ಲರೂ ಒಟ್ಟಾಗಿ ಸೇರಿ ಇದನ್ನು ಯಶಸ್ವಿಗೊಳಿಸಬೇಕು. ಇದು ಜನಮಾನಸಕ್ಕೆ ಮುಟ್ಟುವ ಕಾರ್ಯ ಕ್ರಮವಾಗಲಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಹೇಳಿದರು.

ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಶ್ರೀ ಮಲೆ ಮಹದೇಶ್ವರ ಜ್ಯೋತಿ ಯಾತ್ರೆಗೆ ಕೈಗೊಂಡಂತಹ ಮೂರು ಮಾರ್ಗಗಳ ಬಗ್ಗೆ ವಿವರವಾಗಿ ತಿಳಿಸಿದರು. ಕಾಗಿನೆಲೆ ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ, ಎಂಎಲ್‍ಸಿ ಕೇಶವ ಪ್ರಸಾದ್, ಮಾಜಿ ಎಂಎಲ್‍ಸಿ ಮಾದೇಗೌಡ, ಎಸ್‍ಪಿ ಯತೀಶ್, ಅಪರ ಜಿಲ್ಲಾಕಾರಿ ಡಾ.ಎಚ್. ಎಲ್ ನಾಗರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Articles You Might Like

Share This Article