Thursday, March 13, 2025
Homeಜಿಲ್ಲಾ ಸುದ್ದಿಗಳು | District Newsಬೆಳಗಾವಿ | Belagaviಮಹಾಕುಂಭದಲ್ಲಿ ಮೃತಪಟ್ಟಿದ್ದ ಬೆಳಗಾವಿಯ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿದ...

ಮಹಾಕುಂಭದಲ್ಲಿ ಮೃತಪಟ್ಟಿದ್ದ ಬೆಳಗಾವಿಯ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿದ ಯೋಗಿ ಸರ್ಕಾರ

Yogi government releases Rs 25 lakh compensation each to the families of four people from Belgaum who died in the Mahakumbh

ಬೆಳಗಾವಿ, ಮಾ.13 – ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ಕು ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದೆ.

ಕಳೆದ ಜ.13 ರಿಂದ ಮಾ.26 ವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಜ.29 ರಂದು ಮೌನಿ ಅಮವಾಸ್ಯೆ ಪ್ರಯುಕ್ತ ಪುಣ್ಯಸ್ನಾನದ ವೇಳೆ ಕಾಲ್ತುಳಿತ ಸಂಭವಿಸಿತ್ತು.
ಈ ಕಾಲ್ತುಳಿತ ದುರಂತದಲ್ಲಿ ಬೆಳಗಾವಿ ಮೂಲದ ನಾಲ್ವರಾದ ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ, ಅರುಣ ಕೋಪಡೆ ಮಹಾದೇವಿ ಬಾವನೂರ ಮೃತಪಟ್ಟಿದ್ದರು.

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜ.29 ರಂದು ಮೃತರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಪರಿಹಾರ ಘೋಷಿಸಿದಂತೆ ಕಾಲ್ತುಳಿತ ಸಂಭವಿಸಿದ 40 ದಿನಗಳ ಬಳಿಕ ಇಂದು ಪರಿಹಾರ ಬಿಡುಗಡೆ ಮಾಡಿದೆ.

ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅಕೌಂಟ್‌ಗೆ ಹಣ ಜಮೆಯಾಗಿದ್ದು,ಶೀಘ್ರದಲ್ಲೇ ಕುಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

RELATED ARTICLES

Latest News