ಚಿಕ್ಕಬಳ್ಳಾಪುರ, ಜ.13- ಗುಡಿಬಂಡೆ ತಾಲ್ಲೂಕಿನ ಮಾಚಹಳ್ಳಿ ಕೆರೆಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಯುವ ಪತ್ರಕರ್ತ ಜಿ.ಎಸ್.ಭರತ್ ಧಾರುಣವಾಗಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಭರತ್ ಮೃತ ದುರ್ದೈವಿ. ಬೆಂಗಳೂರಿನಲ್ಲಿ ವಾಸವಿದ್ದ ಅವರು, ಗುಡಿಬಂಡೆ ಪಟ್ಟಣದ ಮೂಲದವರು.
ಗುಡಿಬಂಡೆ ಪಟ್ಟಣದಿಂದ ಬಾಗೇಪಲ್ಲಿಯ ಅತ್ತೆ ಮನೆಗೆ ಹೋಗುವ ವೇಳೆ ಕೆರೆ ಏರಿಯ ತಿರುವಿನಲ್ಲಿ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವರದಿಗಾರಿಕೆ ಮಾಡಿದ್ದರು.