ಮೈಸೂರು, ಏ. 17-ಹಾಡುಹಗಲೇ ಅಪರಿಚಿತ ಯುವಕ ಹಾಗೂ ಯುವತಿ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಮನೆಯೊಳಗೆ ಬಂದು ವೃದ್ದೆಯ ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಿ 4 ಲಕ್ಷ ಮೌಲ್ಯದ ಚಿನ್ನದ ಸರ ದರೋಡೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕು ಸಾಲಿಗ್ರಾಮದ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶೈಲಾ(76) ಎಂಬ ವೃದ್ದ ಮಹಿಳೆಯನ್ನ ದರೋಡೆಕೋರರ ಹಲ್ಲೆಯಿಂದ ಗಾಯಗೊಂಡಿದ್ದಾರೆ. ವೃದ್ದ ಮಹಿಳೆಯ ಸಂಬಂಧಿಕರಾದ ಅನುರಾಗ್ ಅರಸ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ನಿನ್ನೆ ಮಧ್ಯಾಹ್ನ ಮನೆಯಲ್ಲಿ ಶೈಲಾರವರು ಒಬ್ಬಂಟಿಯಾಗಿದ್ದರು.ಈ ಸಮಯ ಬಳಸಿಕೊಂಡ ಖದೀಮ ಜೋಡಿ ಮದುವೆ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಪ್ರವೇಶಿಸಿದೆ. ನೀರು ಬೇಕು ಎಂದು ಕೇಳಿ .
ಶೈಲಾರವರು ಟೀ ಮಾಡಲು ಒಳಗೆ ತೆರಳಿದ್ದಾರೆ. ಈ ವೇಳೆ ಖದೀಮ ಜೋಡಿ ಶೈಲಾರವರ ಮೇಲೆ ಹಲ್ಲೆ ನಡೆಸಿ ಕೈಕಾಲು ಕಟ್ಟಿಹಾಕಿ ಚಿನ್ನದ ಸರ ಕಿತ್ತುಕೊಂಡಿದ್ದಾರೆ. ಅಲ್ಲದೆ ಬಲವಂತವಾಗಿ ಬೀರು ಬೀಗವನ್ನ ಪಡೆದು ಮತ್ತಷ್ಟು ಚಿನ್ನಾಭರಣಕ್ಕಾಗಿ ಹುಡುಕಾಟ ನಡೆಸಿ ಪರಾರಿಯಾಗಿದ್ದಾರೆ. ಅನುರಾಗ್ ಅರಸ್ ರವರು ಮನೆಗೆ ಬಂದಾಗ ಗಾಯಗೊಂಡ ಶೈಲಾರಿಗೆ ಶುಶೂಷೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್, ಅಡಿಷನಲ್ ಎಸ್ಪಿ ಮಲ್ಲಿಕ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬೆರಳು ಮುದ್ರಾ ಘಟಕ ಹಾಗೂ ಶ್ವಾನದಳ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದೆ