ಶಿವಮೊಗ್ಗ,ಜೂ.4- ಐಪಿಎಲ್ ಫೈನಲ್ ಪಂಧ್ಯದಲ್ಲಿ ಆರ್ಸಿಬಿ ತಂಡ ಜಯ ಗಳಿಸಿದ ಹಿನ್ನಲೆಯಲ್ಲಿ ಸಂಭ್ರಮಾಚರಣೆಗೆ ತೆರಳುತ್ತಿದ್ದಾಗ ಎರಡು ಬೈಕ್ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಪಟ್ಟಣದ ರವೀಂದ್ರ ನಗರದ ಗಣಪತಿ ದೇವಾಯದ ಬಳಿ ಕಳೆದ ರಾತ್ರಿ ನಡೆದಿದೆ.
ವೆಂಕಟೇಶ್ ನಗರದ ನಿವಾಸಿ ಅಭಿನಂದನ್ (21) ಮೃತಪಟ್ಟ ಯುವಕ. ಕಳೆದ ರಾತ್ರಿ ಸ್ನೇಹಿತರೊಂದಿಗೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಬೈಕ್ನಲ್ಲಿ ತೆರಳುತ್ತಿದ್ದಾಗ ಎದುರಿಗೆ ಬಂದ ಮತ್ತೊಂದು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಲೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನೂದು ಬೈಕ್ನಲ್ಲಿದ್ದ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.