ಮಂಡ್ಯ, ಮಾ.5-ನವ ವಿವಾಹಿತ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್ (28) ಸಾವು ಮೃತ ದುರ್ದೈವಿ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿಯಾಗಿದ್ದ ಶಶಾಂಕ್ ಜಾರ್ಖಂಡ್ ಮೂಲದ ಯುವತಿ ಅಣ್ಣಾ ಜೊತೆ ಸ್ನೇಹ ಬೆಳೆದಿದೆ.
ನಂತರ ಸ್ನೇಹ ಪ್ರೇಮಕ್ಕೆ ತಿರುಗಿದೆ. ಇಬ್ಬರೂ ಕಳೆದ ಒಂದು ವರ್ಷದಿಂದ ಪ್ರೀತಿ ಮಾಡುತ್ತಿದ್ದರು. ತಮ್ಮ ಪ್ರೇಮದ ವಿಚಾರವನ್ನು ಇಬ್ಬರೂ ತಮ್ಮ ಕುಟುಂಬಸ್ಥರಿಗೆ ತಿಳಿಸಿದಾಗ ಮದುವೆಗೆ ಎರಡೂ ಮನೆಯವರು ಒಪ್ಪಿಗೆ ಸೂಚಿಸಿದ್ದಾರೆ. ಮನೆಯವರ ಸಮ್ಮುಖದಲ್ಲಿ ಕಳೆದ ಭಾನುವಾರ ಮೈಸೂರಿನ ರೆಸಾರ್ಟ್ ಒಂದರಲ್ಲಿ ಮದುವೆಯಾಗಿತ್ತು.
ಶಶಾಂಕ್‌ಗೆ ಮದುವೆ ದಿನ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು. ಈ ವಿಚಾರವನ್ನು ಶಶಾಂಕ್ ತನ್ನ ಸ್ನೇಹಿತರ ಮುಂದೆ ಹೇಳಿಕೊಂಡಿದ್ದನು.ನಂತರ, ಶಶಾಂಕ್ ಮತ್ತು ಆತನ ಕುಟುಂಬಸ್ಥರು ಬೆಂಗಳೂರಿಗೆ ಬಂದು ವಾಸವಾಗಿದ್ದರು.
ನಿನ್ನೆ ಶಶಾಂಕ್‌ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಪೋಷಕರು ಕೂಡಲೇ ಶಶಾಂಕ್‌ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಅಷ್ಟೊತ್ತಿಗಾಗಲೇ ಶಶಾಂಕ್ ಮೃತಪಟ್ಟಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರೀತಿಸಿದ ಯುವತಿಯನ್ನು ಮದುವೆಯಾಗಿ ಸಂಸಾರ ನವ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಯಲ್ಲಿ ಶಶಾಂಕ್ ವಿಧಿಯಾಟಕ್ಕೆ ಬಲಿಯಾಗಿದ್ದು ಕುಟುಂಬ,ಸಂಬಂಧಿಗಳು ಹಾಗು ಸ್ನೇಹಿತರು ಕಣ್ಣೀರು ಹಾಕಿದ್ದಾರೆ.