Tuesday, May 21, 2024
Homeರಾಜಕೀಯಪೆನ್‌ಡ್ರೈವ್‌ ಪ್ರಕರಣಕ್ಕೆ ಮೋದಿ ಸ್ಪಷ್ಟನೆಗೆ ಆಗ್ರಹಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್‌‍ ಕಾರ್ಯಕರ್ತರ ಮುತ್ತಿಗೆ

ಪೆನ್‌ಡ್ರೈವ್‌ ಪ್ರಕರಣಕ್ಕೆ ಮೋದಿ ಸ್ಪಷ್ಟನೆಗೆ ಆಗ್ರಹಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್‌‍ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು, ಏ.30- ಹಾಸನದ ಸಂಸದ ಪ್ರಜ್ಞಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌‍ ಕಾರ್ಯಕರ್ತರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು.

ಯುವ ಕಾಂಗ್ರೆಸ್‌‍ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌‍, ಕಾರ್ಯಾಧ್ಯಕ್ಷ ಮಂಜುನಾಥ್‌ಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಇಂದು ಬೆಳಗ್ಗೆ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲ ಕಾರ್ಯಕರ್ತರು ಪಕ್ಷದ ಕಾರ್ಯಾಲಯದ ಒಳಗೆ ನುಸುಳಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ಹಂತದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆಯಿತು. ಯುವ ಕಾಂಗ್ರೆಸ್‌‍ನ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ಈ ವೇಳೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌‍, ಪ್ರಧಾನಿಯವರು ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಾರೆ. ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಪ್ರಧಾನಿಯವರು ಮೌನವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಎನ್‌ಡಿಎ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಜೆಡಿಎಸ್‌‍ನ ಸಂಸದರು ಮಾಡಿರುವ ಕೃತ್ಯವನ್ನು ಬಿಜೆಪಿ ಹೇಗೆ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದ ಕಾರ್ಯಕರ್ತರು, ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ರೇವಣ್ಣರನ್ನು ಜರ್ಮಿನಿಗೆ ಓಡಿ ಹೋಗಲು ಸಹಾಯ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರಧಾನಿಗಳೇ ಮಾತನಾಡಬೇಕು ಎಂದು ಒತ್ತಾಯಿಸಿದರು.

RELATED ARTICLES

Latest News