ಸಮಷ್ಟಿಪುರ, ಜು.25-ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಯುವಕನನ್ನುಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಬಿಹಾರದ ಸಮಷ್ಟಿಪುರ ಜಿಲ್ಲೆಯ ಪೆಥಿಯಾ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು,ಸುಮಿತ್ ಕುಮಾರ್ ಅಲಿಯಾಸ್ ಗುಡ್ಡು (22) ಹತ್ಯೆಯಾದ ಯುವಕನಾಗಿದ್ದಾನೆ .
ಕೊಲೆ ಪ್ರಕರಣದ ಆರೋಪಿಯಾಗಿರುವ ಕುಮಾರ್ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಪಾಂಡೆ ತಿಳಿಸಿದರು.
ಬೈಕ್‌ನಲ್ಲಿ ಬಂದು ಗುಂಡು ಹಾರಿಸಿ ದುಷ್ಕರ್ಮಿ ಪರಾರಿಯಾಗಿದ್ದು ,ತೀವ್ರವಾಗಿ ಗಾಯಗೊಂಡ ಕುಮಾರ್‌ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅತ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಮಾಹಿತಿ ನೀಡಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.ಕೊಲೆಯ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ವೈಯಕ್ತಿಕ ದ್ವೇಷವು ಹತ್ಯೆಗೆ ಕಾರಣವಾಗಬಹುದು ಎಂದು ತಿಳಿಸಿದ್ದಾರೆ.
- ಪೊಲೀಸರ ವೈಫಲ್ಯವೇ ದುರಂತಕ್ಕೆ ಕಾರಣ : ರೇವಣ್ಣ ಆಕ್ರೋಶ
- ಮೊಸಳೆಹೊಸಹಳ್ಳಿ ದುರಂತ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕು
- ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಎಫ್ಐಆರ್ ಅನಿವಾರ್ಯ : ಸಿಎಂ
- ಗಣೇಶೋತ್ಸವ ದುರಂತ : 9 ಜನರನ್ನು ಬಲಿಪಡೆದ ಟ್ರಕ್ ಚಾಲಕನ ವಿಚಾರಣೆ
- ಹಾಸನ ಗಣೇಶೋತ್ಸವ ದುರಂತ : 10 ಲಕ್ಷ ಪರಿಹಾರಕ್ಕೆ ಅಶೋಕ್ ಆಗ್ರಹ