Friday, July 25, 2025
Homeಜಿಲ್ಲಾ ಸುದ್ದಿಗಳು | District Newsಮೈಸೂರು | Mysuruಮಧ್ಯರಾತ್ರಿ ನಡುರಸ್ತೆಯಲ್ಲಿ ಹುಟ್ಟುಹಬ್ಬ ಆಚರಿಸಿದ ಯುವಕರು ಪೊಲೀಸರ ವಶಕ್ಕೆ

ಮಧ್ಯರಾತ್ರಿ ನಡುರಸ್ತೆಯಲ್ಲಿ ಹುಟ್ಟುಹಬ್ಬ ಆಚರಿಸಿದ ಯುವಕರು ಪೊಲೀಸರ ವಶಕ್ಕೆ

Youths who celebrated birthdays on the road at midnight detained by police

ಮೈಸೂರು,ಜು.24-ಮಧ್ಯರಾತ್ರಿ ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವೇಶ್ವರ ರಸ್ತೆಯ 10ನೇ ಕ್ರಾಸ್‌ನಲ್ಲಿ ಮಧ್ಯರಾತ್ರಿ ಯುವಕರ ಗುಂಪು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಕೂಗಾಡುತ್ತಾ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದರು.

ಈ ಸಂಬಂಧ ಬಂದ ದೂರಿನ ಮೇರೆಗೆ ನಗರದ ಕೆ.ಆರ್‌ಠಾಣೆ ಪೊಲೀಸರು 5 ಮಂದಿ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕ್ರಮಕೈಗೊಂಡಿದ್ದಾರೆ. ಇನ್ನೂ ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

RELATED ARTICLES

Latest News