Wednesday, May 1, 2024
Homeಬೆಂಗಳೂರುಬೆಂಗಳೂರು ವಿಮಾನ ನಿಲ್ದಾಣದ ರನ್‌ವೇ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನ

ಬೆಂಗಳೂರು ವಿಮಾನ ನಿಲ್ದಾಣದ ರನ್‌ವೇ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನ

ಬೆಂಗಳೂರು, ಏ.17- ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಹಾಗೂ ರನ್ವೇ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್ ನನ್ನು ಏರ್ ಪೋರ್ಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಲಹಂಕದ ವಿಕಾಸ್ಗೌಡ ಬಂಧಿತ ಯೂಟ್ಯೂಬರ್. ಈತ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶಿಸಿ 24 ಗಂಟೆ ರನ್‌ವೇ ಬಳಿಯೇ ಇದ್ದು ವಿಡಿಯೋ ಮಾಡಿದ್ದೇನೆಂದು ಹೇಳಿಕೊಂಡು ತನ್ನ ಯೂಟ್ಯೂಬ್ನಲ್ಲಿ ಆ ವಿಡಿಯೋವನ್ನು ಅಪ್ಲೋಡ್ ಮಾಡಿದ್ದನು.

ಈ ವಿಡಿಯೋ ಗಮನಿಸಿದ ಸಿಐಎಸ್ಎಫ್ ಅಧಿಕಾರಿಗಳು ಅದನ್ನು ಗಂಭೀರವಾಗಿ ಪರಿಗಣಿಸಿ ವಿಕಾಸ್ಗೌಡನ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಪೊಲೀಸರು ವಿಕಾಸಗೌಡನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ವಿಮಾನದಲ್ಲಿ ಚೆನ್ನೈಗೆ ಪ್ರಯಾಣಿಸಲು ಟಿಕೆಟ್ ಪಡೆದಿದ್ದೆ. ಆದರೆ ವಿಮಾನ ಹತ್ತದೇ ರನ್ವೇಯಲ್ಲೇ ಉಳಿದುಕೊಂಡು ಸುಮಾರು ನಾಲ್ಕೈದು ಗಂಟೆಗಳ ಕಾಲ ಅಲ್ಲಿಯೇ ಇದ್ದು ವಿಡಿಯೋ ಮಾಡಿಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ವಿಕಾಸಗೌಡ ಪೊಲೀಸರ ಮುಂದೆ ಹೇಳಿದ್ದಾನೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News