ನವದೆಹಲಿ, ಜ 4 (ಪಿಟಿಐ) ವೈಎಎಸ್‍ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿರುವ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ನಂತರ ಪಕ್ಷಕ್ಕೆ ಸೇರ್ಪಡೆಗೊಂಡರು.
ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ, ಶರ್ಮಿಳಾ ಅವರು ಕಾಂಗ್ರೆಸ್‍ಗೆ ಸೇರುತ್ತೀರಾ ಎಂದು ಕೇಳಿದಾಗ, ಅವರು ಸುದ್ದಿಗಾರರಿಗೆ ಹೌದು, ಹಾಗೆ ತೋರುತ್ತಿದೆ ಎಂದು ಹೇಳಿದ ಅವರು ನಂತರ ಎಐಸಿಸಿ ಕಚೇರಿಗೆ ತೆರಳಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೈದರಾಬಾದ್‍ನಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶರ್ಮಿಳಾ, ನಾನು ಮತ್ತು ಇತರ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‍ನ ಉನ್ನತ ನಾಯಕರನ್ನು ಭೇಟಿ ಮಾಡಿ ದೆಹಲಿಯಲ್ಲಿ ನಿರ್ಣಾಯಕ ಘೋಷಣೆ ಮಾಡಲಿದ್ದೇವೆ ಎಂದು ಘೋಷಿಸಿದ್ದರು.
ಶರ್ಮಿಳಾ ಅವರು ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ.
ವೈಎಸ್‍ಆರ್‍ಟಿಪಿಯನ್ನು ಕಾಂಗ್ರೆಸ್‍ನೊಂದಿಗೆ ವಿಲೀನಗೊಳಿಸಿದ ನಂತರ ಅವರಿಗೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‍ನಲ್ಲಿ ಸ್ಥಾನ ನೀಡಬಹುದು.
ಪ್ರಾಣಿಗಳ ಕೊಬ್ಬಿನಿಂದ ತಯಾರಾಗುತ್ತೆ ತುಪ್ಪ..!
ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‍ಎಸ್‍ನ ಭ್ರಷ್ಟ ಮತ್ತು ಜನವಿರೋಧಿ ಆಡಳಿತವನ್ನು ಕೊನೆಗೊಳಿಸಲು ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶರ್ಮಿಳಾ ಕಾಂಗ್ರೆಸ್‍ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು.