Sunday, September 15, 2024
Homeರಾಜ್ಯದರ್ಶನ್‌ ತಪ್ಪು ಮಾಡಿ ಜೈಲಿಗೆ ಹೋಗಿದ್ದಾರೆ : ಜಮೀರ್

ದರ್ಶನ್‌ ತಪ್ಪು ಮಾಡಿ ಜೈಲಿಗೆ ಹೋಗಿದ್ದಾರೆ : ಜಮೀರ್

Zameer Ahmed Khan on Darshan's Case

ಹಾವೇರಿ,ಸೆ.3- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತಪ್ಪು ಮಾಡಿದ ಕಾರಣಕ್ಕಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ನನ್ನ ಹೆಸರನ್ನು ಏಕೆ ಥಳಕು ಹಾಕಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ ಆಕ್ಷೇಪ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್‌ ನನ್ನ ಆತೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದರು.

ಜಮೀರ್‌ ಅಹಮದ್‌ ಖಾನ್‌ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವುದರಿಂದ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂಬ ವ್ಯಾಖ್ಯಾನಗಳಿವೆ. ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ದರ್ಶನ್‌ ರೌಡಿಶೀಟರ್‌ಗಳ ಜೊತೆ ಸೇರಿ ರಾಜಾತಿಥ್ಯ ಪಡೆದುಕೊಂಡು ಫೋಟೊಗಳು ವೈರಲ್‌ ಆಗಿದ್ದವು.

ಈ ಹಿನ್ನೆಲೆಯಲ್ಲಿ ದರ್ಶನ್‌ರನ್ನು ಬೆಳಗಾವಿ ಅಥವಾ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಚರ್ಚೆಗಳು ನಡೆದಾಗ ಅಂತಿಮವಾಗಿ ಬಳ್ಳಾರಿಗೆ ಸ್ಥಳಾಂತರಿಸಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಮೀರ್‌, ನನಗೂ, ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುವ ಜೊತೆಗೆ ತಪ್ಪು ಮಾಡಿರುವುದಕ್ಕೆ ಜೈಲಿಗೆ ಹೋಗಿದ್ದಾರೆ, ಸುಮನೇ ಯಾರೂ ಬಂಧನಕ್ಕೊಳಗಾಗುವುದಿಲ್ಲ ಎಂದು ಪುನರುಚ್ಚರಿಸಿದರು.

RELATED ARTICLES

Latest News