ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಮನೆಯಲ್ಲಿ ಕಳ್ಳತನ

GP-01

ವಿಜಯಪುರ, ಡಿ.6- ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬೆಂಗಳೂರಿಗೆ ತೆರಳಿದ್ದ ನೀಲಮ್ಮ ಮೇಟಿ ಅವರ ಮನೆಯಲ್ಲಿ ಕಳ್ಳತನವಾಗಿದೆ.
ಕನಕದಾಸ ಬಡಾವಣೆಯಲ್ಲಿರುವ ಮನೆಯ ಬೀಗ ಮುರಿದು ಒಳ ನುಗ್ಗಿರುವ ಚೋರರು ಬೀರುವಿನಲ್ಲಿದ್ದ 4 ಲಕ್ಷ ನಗದು, ಚಿನ್ನಾಭರಣ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಫಾರ್ಚುನರ್ ಕಾರನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ನಿನ್ನೆಯಷ್ಟೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬೆಂಗಳೂರಿಗೆ ನೀಲಮ್ಮ ದಂಪತಿ ಬೆಂಗಳೂರಿಗೆ ತೆರಳಿದ್ದರು.

ಇಂದು ನಸುಕಿನ ಜಾವ ಮನೆಗೆ ವಾಪಸ್ ಆಗಮಿಸಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಜಲ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.